ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ್ ಜಾಧವ್ ಚಾಲನೆ ನೀಡಿದ್ರು.. ವಿಕಸಿತ ಭಾರತ್ ಸಂಕಲ್ಪ ಯಾತ್ರೆ ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳೊಂದಿಗೆ ಸಮಾಜದ ಕೊನೆಯ ವ್ಯಕ್ತಿಯನ್ನು ತಲುಪುವ ಗುರಿಯನ್ನು ಹೊಂದಿದ್ದು ಕೇಂದ್ರ ಸರ್ಕಾರದ ಪ್ರಮುಖ ಯೋಜನೆ ಇದಾಗಿದೆ.
ಇಂತಹ ಯೋಜನೆಗಳ ಲಾಭವನ್ನು ಜನಸಾಮಾನ್ಯರಿಗೆ ತಲುಪಿಸಲು ಕೇಂದ್ರ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ.ಇಂತಹ ಉದ್ದೇಶಕ್ಕಾಗಿ ರಾಷ್ಟ್ರವ್ಯಾಪಿ ಅಭಿಯಾನ, ವಿಕಸಿತ ಭಾರತ್ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಲಾಗಿದೆ.ಈ ಕಾರ್ಯಕ್ರಮದ ಬಗ್ಗೆ ತಿಳಿಸಿದ ಸಂಸದ ಡಾ.ಉಮೇಶ್ ಜಾಧವ್ ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು..