ಬೆಂಗಳೂರು: ವಿಲ್ಲಾಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮರನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ರಾಮ್ ಕುಮಾರ್(23), ಇಸೈರಾಜ್(27) ಇಬ್ಬರು ಬಂಧಿತ ಆರೋಪಿಗಳಾಗಿದ್ದು, ಎಲ್ಲಾ ಮನೆಯಲ್ಲಿ ಮಲಗಿರುವ ಸಮಯದಲ್ಲೇ ವಿಲ್ಲಾಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮರು ಹಿಂದಿನ ಬಾಗಿಲಿನಿಂದ ಎಂಟ್ರಿ ಕೊಟ್ಟು ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ಬೆಂಗಳೂರಿನ ಬಾಗಲೂರು ವ್ಯಾಪ್ತಿಯ ಕಣ್ಣೂರುಹಳ್ಳಿಯ ವಿಲ್ಲಾದಲ್ಲಿ ಕಳ್ಳರು ಕೈಚಳಕ ತೋರಿದ್ದರು.
Brahmi Leaves: ಒಂದೆಲಗದ ಉಪಯೋಗ ಒಂದೆರಡಲ್ಲ! ಈ ಸೊಪ್ಪು ಸೇವಿಸಿ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಿ
ವಿಲ್ಲಾ ಮಾಲೀಕ ರಮೇಶ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದ ಬಾಗಲೂರು ಪೊಲೀಸರು, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಬ್ಬರು ಆರೋಪಿಗಳ 252 ಗ್ರಾಂ ಚಿನ್ನಾಭರಣ ಕದ್ದು ಒಂದು ತಿಂಗಳ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಸಿಸಿಟಿವಿ, ಟವರ್ ಲೊಕೇಶನ್ ಟ್ರ್ಯಾಕ್ ಮಾಡಿ ಬಂಧಿಸಲಾಗಿದೆ. ಬಂಧನದ ಬಳಿಕ ಈ ಹಿಂದೆ ಕಳ್ಳತನ ಮಾಡಿದ್ದ ಮತ್ತೊಂದು ಪ್ರಕರಣವು ಬೆಳಕಿಗೆ ಬಂದಿದೆ. ಬಂಧಿತರಿಂದ ಒಟ್ಟು 30 ಲಕ್ಣ ಮೌಲ್ಯದ 437 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.