ದೆಹಲಿ: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ (Indian Ambassador) ವಿನಯ್ ಮೋಹನ್ ಕ್ವಾತ್ರಾ (Vinay Mohan Kwatra) ಅಧಿಕಾರ ಸ್ವೀಕರಿಸಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ.
61 ವರ್ಷ ವಯಸ್ಸಿನ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ (Foreign Secretary) ಕೆಲಸ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಕ್ವಾತ್ರಾ ಅವರು ಫ್ರಾನ್ಸ್ ಮತ್ತು ನೇಪಾಳಕ್ಕೆ ಭಾರತದ ರಾಯಭಾರಿಯಾಗಿದ್ದರು, ನಂತರ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಕಳೆದ ಜುಲೈ 14 ರಂದು ವಿದೇಶಾಂಗ ಸೇವೆಯಿಂದ ನಿವೃತ್ತರಾಗಿದ್ದರು.
Independence Day Spl: ಯಾವ ವಾಹನಗಳ ಮೇಲೆ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಬಹುದು? ಏಕೆ?
ಕ್ವಾತ್ರಾ ಅವರು ತರಂಜಿತ್ ಸಿಂಗ್ ಸಂಧು ಅವರ ಉತ್ತರಾಧಿಕಾರಿಯಾಗಿದ್ದಾರೆ. ಈ ವರ್ಷಾರಂಭದಲ್ಲಿ ವಿದೇಶಿ ಸೇವೆಯಿಂದ ನಿವೃತ್ತರಾದ ಕ್ವಾತ್ರಾ 2020 ರಿಂದ 2024ರ ಅವಧಿಗೆ ಯುಎಸ್ನಲ್ಲಿ (US) ಭಾರತದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅಮೆರಿಕದಲ್ಲಿ ಭಾರತದ ನೂತನ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.