ವಿನೇಶ್ ಫೋಗಟ್ ಬೆಳ್ಳಿ ಪದಕ ನೀಡಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಒಡೆದ ಪೈಪ್ಲೈನ್; ಆಗಸದೆತ್ತರಕ್ಕೆ ಚಿಮ್ಮಿದ ನೀರು, ವಾಹನ ಸಂಚಾರಕ್ಕೆ ಅಡ್ಡಿ!
ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಂಡ ನಂತರ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು. ಕಳೆದ ಮಂಗಳವಾರ ರಾತ್ರಿ ನಡೆದ ಸೆಮಿಫೈನಲ್ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಫೋಗಟ್ ಚಿನ್ನದ ಪದಕದ ಹೋರಾಟಕ್ಕೆ ಪ್ರವೇಶಿಸಿದ್ದರು. ಅವರು ಚಿನ್ನದ ಪದಕಕ್ಕಾಗಿ ಯುನೈಟೆಡ್ ಸ್ಟೇಟ್ಸ್ನ ಸಾರಾ ಆನ್ ಹಿಲ್ಡೆಬ್ರಾಂಟ್ ವಿರುದ್ಧ ಸ್ಪರ್ಧಿಸಲು ಸಜ್ಜಾಗಿದ್ದರು ಆದರೆ ತೂಕದ ಮಿತಿ ಉಲ್ಲಂಘಿಸಿದ್ದಕ್ಕಾಗಿ ಬುಧವಾರ ಅನರ್ಹಗೊಂಡರು.
ಈ ಕುರಿತಾಗಿ ಮಾತನಾಡಿದ ಗಂಗೂಲಿ, ತನಗೆ ಸರಿಯಾಗಿ ಕುಸ್ತಿಯ ನಿಯಮಗಳು ತಿಳಿದಿಲ್ಲ ಆದರೆ ಅವರು ಬೆಳ್ಳಿ ಪದಕಕ್ಕೆ ಅರ್ಹರು ಎಂದು ಹೇಳಿದ್ದಾರೆ.
ನಿಖರವಾದ ನಿಯಮ ಏನು ಎಂದು ನನಗೆ ತಿಳಿದಿಲ್ಲ, ಆದರೆ ವಿನೇಶ್ ಫೈನಲ್ಗೆ ಹೋಗುವ ತನಕ ಸರಿಯಾಗಿ ಅರ್ಹತೆ ಪಡೆದಿದ್ದಾರೆ ಎಂದು ನನಗೆ ಖಾತ್ರಿಯಿದೆ. ಆದ್ದರಿಂದ ಫೈನಲ್ ಗೆ ಹೋದ ಮೇಲೆ ಬೆಳ್ಳಿ ಅಥವಾ ಚಿನ್ನದ ಪದಕಕ್ಕೆ ಅರ್ಹರು. ಹೀಗಾಗಿ ಅವರನ್ನು ತಪ್ಪಾಗಿ ಅನರ್ಹಗೊಳಿಸಲಾಗಿದೆ. ಹೀಗಾಗಿ ಅವರು ಕನಿಷ್ಠ ಬೆಳ್ಳಿಗೆ ಅರ್ಹರು,” ಎಂದು ಗಂಗೂಲಿ ಹೇಳಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡ ವಿನೇಶ್ ಫೋಗಟ್ ಅವರಿಗೆ ಬೆಳ್ಳಿ ಪದಕ ನೀಡಬೇಕೇ ಎಂಬ ಬಗ್ಗೆ ತೀರ್ಪು ನೀಡುವ ಗಡುವನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಆಗಸ್ಟ್ 13 ರವರೆಗೆ ವಿಸ್ತರಿಸಿದೆ.