ಹುಬ್ಬಳ್ಳಿ: ಇತ್ತೀಚೆಗಷ್ಟೇ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಹುದ್ದೆಗೆ ಮುಂಬಡ್ತಿ ಪಡೆದು, ಕಾರ್ಯವ್ಯವಸ್ಥೆ ಹಂಚಿಕೆಯಡಿ ಬಾಗಲಕೊಟ ಸಹಾಯಕ ನಿರ್ದೇಶಕ ಹುದ್ದೆಯ ಪ್ರಭಾರದಲ್ಲಿದ್ದ ವಿನೋದಕುಮಾರ್ ಭಗವತಿ(53) ಇಂದು ಬೆಳಿಗ್ಗೆ ವಿಜಯಪುರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತೀವ್ರ ಅನಾರೋಗ್ಯದಿಂದ ಕಳೆದ ಸುಮಾರು ಒಂದು ತಿಂಗಳಿನಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಹುಬ್ಬಳ್ಳಿ ರಾಜ್ಯ ಸಮಾಚಾರ ಕೇಂದ್ರದಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು,ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಸಂಜೆ ವಿಜಾಪುರದಲ್ಲಿ ಜರುಗಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಕುಟುಂಬದ ಸಂಪರ್ಕ ಸಂಖ್ಯೆ:
+91 90084 59308