ಬೆಂಗಳೂರು:– ನಗರದ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಡು ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
IPL 2024: ತವರಿನಲ್ಲೇ ಮುಂಬೈಗೆ ಮುಖಭಂಗ- ಪಾಂಡ್ಯಾ ಪಡೆಗೆ ಹ್ಯಾಟ್ರಿಕ್ ಸೋಲು!
ಅನುಮತಿ ಇಲ್ಲದೆ ಬಿಜೆಪಿ ಚಿಹ್ನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಅಂಟಿಸಲಾಗಿತ್ತು. ಈ ಬಗ್ಗೆ ಸ್ಥಳೀಯರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದರ ಅನ್ವಯ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಬಗ್ಗೆ ಚುನಾವಣಾಧಿಕಾರಿಗಳು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, FIR ದಾಖಲಾಗಿದೆ.