ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಜೈಲಿಂದ ರಿಲೀಸ್: ಸಿಟಿ ರವಿಗೆ ಭರ್ಜರಿ ಸ್ವಾಗತ, ಬೆಂಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮ!
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ಸಮಜಾಯಿಷಿ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.