ಬಿಸಿಸಿಐನ ಕಟ್ಟುನಿಟ್ಟಿನ ಆದೇಶಕ್ಕೆ ತಲೆಬಾಗಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಇದೀಗ ದೇಶೀ ಟೂರ್ನಿಯತ್ತ ಮುಖಮಾಡಿದ್ದಾರೆ. ಅದರಂತೆ ಮುಂಬರುವ ರಣಜಿ ಟ್ರೋಫಿ ಆಡುವುದಕ್ಕೆ ಎಲ್ಲಾ ಆಟಗಾರರು ತಮ್ಮ ತಯಾರಿಯನ್ನು ಆರಂಭಿಸಿದ್ದು, ಇದೀಗ ತಮ್ಮ ರಾಜ್ಯ ತಂಡಗಳ ಪರ ಬಹಳ ವರ್ಷಗಳ ಬಳಿಕ ಕಣಕ್ಕಿಳಿಯಲಿದ್ದಾರೆ.
ಇದಕ್ಕೆ ಪೂರಕವಾಗಿ ಇದೀಗ ದೆಹಲಿ ತನ್ನ ರಣಜಿ ಟ್ರೋಫಿ ತಂಡವನ್ನು ಅಂತಿಮಗೊಳಿಸಿದ್ದು, ಈ ತಂಡದಲ್ಲಿ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಸಿಡ್ನಿ ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿಯ ಕುತ್ತಿಗೆ ಉಳುಕಿತ್ತು. ಹೀಗಾಗಿ ಅವರಿನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇದಕ್ಕಾಗಿ ವಿರಾಟ್ ಇಂಜೆಕ್ಷನ್ ಕೂಡ ತೆಗೆದುಕೊಂಡಿದ್ದಾರೆ. ವಿರಾಟ್ ಫಿಟ್ ಆಗದೇ ಇದ್ದರೆ ಈ ಪಂದ್ಯದಲ್ಲಿ ಆಡುವುದಿಲ್ಲ ಎಂದು ಹೇಳಲಾಗಿತ್ತು.
ಮಂಗಳವಾರ ಈ ಕೆಲಸಗಳನ್ನು ಮಾಡಿದ್ರೆ ನಿಮಗೆ ಬೇಡವೆಂದರೂ ಸಂಪತ್ತು ಹುಡುಕಿ ಬರುತ್ತೆ.!
ಆದ್ರೆ ಇದೀಗ ವರದಿಯ ಪ್ರಕಾರ ಜನವರಿ 30 ರಿಂದ ನಡೆಯಲಿರುವ 2ನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿರುತ್ತದೆ ಎಂದು ಹೇಳಲಾಗುತ್ತಿದೆ. ಜನವರಿ 30 ರಿಂದ ನಡೆಯಲಿರುವ ಪಂದ್ಯವನ್ನು ಆಡುವುದಾಗಿ ವಿರಾಟ್ ಕೊಹ್ಲಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಗೆ ತಿಳಿಸಿದ್ದಾರೆ ಎಂದು ವರದಿಯೊಂದು ಹೇಳಿದೆ. ರೈಲ್ವೇಸ್ ವಿರುದ್ಧ ರಣಜಿ ಟ್ರೋಫಿಯ ಗುಂಪು ಹಂತದಲ್ಲಿ ಇದು ದೆಹಲಿಯ ಕೊನೆಯ ಪಂದ್ಯವಾಗಿದೆ. ಈ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡ ಸೌರಾಷ್ಟ್ರ ವಿರುದ್ಧ ಜನವರಿ 23ರಿಂದ ಪಂದ್ಯ ಆಡಬೇಕಿದೆ.
ಈ ಎರಡೂ ಪಂದ್ಯಗಳಿಗೆ ಕೊಹ್ಲಿಯನ್ನು ದೆಹಲಿಯ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು ಆದರೆ ಕತ್ತು ನೋವಿನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಮೊದಲ ಪಂದ್ಯದಿಂದ ಹಿಂದೆ ಸರಿದಿದ್ದರು. ಆ ನಂತರ DDCA ಆಯ್ಕೆಗಾರರು ಕೊಹ್ಲಿಯ ಹೆಸರನ್ನು ನವೀಕರಿಸಿದ ತಂಡದಿಂದ ತೆಗೆದುಹಾಕಿದ್ದರು. ಒಂದು ವೇಳೆ ಕೊಹ್ಲಿ ಎರಡನೇ ಪಂದ್ಯದಲ್ಲಿ ಆಡಿದರೆ 13 ವರ್ಷಗಳ ನಂತರ ರಣಜಿ ಟ್ರೋಫಿ ಪಂದ್ಯದಲ್ಲಿ ಆಡಿದಂತ್ತಾಗುತ್ತದೆ.
ಕೊಹ್ಲಿ ಕೊನೆಯ ಬಾರಿಗೆ 2012ರಲ್ಲಿ ದೆಹಲಿ ಪರ ರಣಜಿ ಪಂದ್ಯ ಆಡಿದ್ದರು. ಆದಾಗ್ಯೂ, ಈ ಬಗ್ಗೆ ಇನ್ನೂ ಅನುಮಾನವಿದೆ ಏಕೆಂದರೆ ಈ ಪಂದ್ಯವು ಜನವರಿ 30 ರಿಂದ ಫೆಬ್ರವರಿ 2 ರವರೆಗೆ ನಡೆಯಲಿದ್ದು, ನಂತರ ಫೆಬ್ರವರಿ 6 ರಿಂದ ಏಕದಿನ ಸರಣಿ ನಡೆಯಲಿದೆ. ಇದರಲ್ಲಿ ಕೊಹ್ಲಿ ಟೀಂ ಇಂಡಿಯಾದ ಭಾಗವಾಗಿದ್ದಾರೆ. ಹೀಗಿರುವಾಗ ಮೊದಲ ಏಕದಿನ ಪಂದ್ಯದಿಂದ ವಿರಾಮ ತೆಗೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ಕಾಡುತ್ತಲೇ ಇದೆ.