ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ ಅವರು ಡೇವಿಡ್ ವಾರ್ನರ್ ದಾಖಲೆ ಸರಿಗಟ್ಟಿದ್ದಾರೆ.
ಬೆಂಗಳೂರಿನಲ್ಲಿ ಬೆಸ್ಕಾಂ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟ – ನಾಲ್ಕು ಮಂದಿಗೆ ಗಂಭೀರ ಗಾಯ..!
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಈ ಸೀಸನ್ನಲ್ಲಿ ತನ್ನ ಅದ್ಭುತ ಫಾರ್ಮ್ ಮುಂದುವರೆಸಿದ್ದಾರೆ. ಈ ಪಂದ್ಯದಲ್ಲಿ ಕೇವಲ 44 ಎಸೆತಗಳನ್ನು ಎದುರಿಸಿದ ವಿರಾಟ್ 6 ಬೌಂಡರಿ ಮತ್ತು 3 ಸಿಕ್ಸರ್ ಸಹಿತ 70 ರನ್ಗಳ ಇನಿಂಗ್ಸ್ ಆಡಿದರು.
ಗುಜರಾತ್ ಟೈಟಾನ್ಸ್ ವಿರುದ್ಧ ಅಜೇಯ 70 ರನ್ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ, ಈ70 ರನ್ಗಳ ಇನ್ನಿಂಗ್ಸ್ನೊಂದಿಗೆ ಈ ಐಪಿಎಲ್ ಸೀಸನ್ನಲ್ಲಿ 500 ರನ್ ಪೂರೈಸಿದ್ದಾರೆ. ಇದರೊಂದಿಗೆ ಆರೆಂಜ್ ಕ್ಯಾಪ್ ರೇಸ್ನಲ್ಲಿ ತನ್ನ ಪಾರುಪತ್ಯವನ್ನು ಮುಂದುವರೆಸಿದ್ದಾರೆ. ಹಾಗೆಯೇ ಈ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಇತಿಹಾಸ ಕೂಡ ಸೃಷ್ಟಿಸಿದ್ದಾರೆ.
ಪ್ರಸ್ತುತ ಈ ಸೀಸನ್ನಲ್ಲಿ 10 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 500 ರನ್ಗಳ ಗಡಿ ದಾಟಿದ್ದಾರೆ. ಇದರೊಂದಿಗೆ ಐಪಿಎಲ್ ಅಧಿಕ ಬಾರಿ 500 ರನ್ಗಳ ಗಡಿ ದಾಟಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ
ಇದುವರೆಗೆ ನಡೆದಿರುವ 17 ಆವೃತ್ತಿಗಳ ಪೈಕಿ ವಿರಾಟ್ ಕೊಹ್ಲಿ 7 ಸೀಸನ್ಗಳಲ್ಲಿ 500 ರನ್ಗಳ ಗಡಿ ದಾಟಿದ್ದಾರೆ. ಇದರೊಂದಿಗೆ ಐಪಿಎಲ್ನಲ್ಲಿ ಅತಿ ಹೆಚ್ಚು ಬಾರಿ 500 ಪ್ಲಸ್ ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಕೊಹ್ಲಿ ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಅವರನ್ನು ಸರಿಗಟ್ಟಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)