ಆಧುನಿಕ ಕ್ರಿಕೆಟ್ ಜಗತ್ತಿನ ದಿಗ್ಗಜ ವಿರಾಟ್ ಕೊಹ್ಲಿ ಬೆಂಗಳೂರು ಫ್ರಾಂಚೈಸಿಯೊಂದಿಗೆ ಟ್ರೋಫಿ ಗೆಲ್ಲಲು ಅರ್ಹರಾಗಿದ್ದಾರೆ ಎಂದು ಇಂಗ್ಲೆಂಡ್ ತಂಡದ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್ ಹೇಳಿದ್ದಾರೆ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರ್ ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, 49 ಎಸೆತಗಳಲ್ಲೇ 77ರನ್ ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
35 ವರ್ಷದ ಬ್ಯಾಟಿಂಗ್ ಸ್ಟಾರ್ ನ ಪ್ರದರ್ಶನವನ್ನು ಕೊಂಡಾಡಿರುವ ಬ್ರಾಡ್, ಆತ ವಿಶ್ವದ ಶ್ರೇಷ್ಠ ಫಿನಿಶರ್ ಗಳಲ್ಲಿ ಒಬ್ಬರು ಎಂದು ಮುಕ್ತ ಕಂಠದಿಂದ ಗುಣಗಾನ ಮಾಡಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಜೊತೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಇಂಗ್ಲೆಂಡ್ ನ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್, ಆಧುನಿಕ ಕ್ರಿಕೆಟ್ ಜಗತ್ತಿನ ದಿಗ್ಗಜರಾಗಿರುವ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಐಪಿಎಲ್ ಟ್ರೋಫಿ ಗೆಲ್ಲಲು ಅರ್ಹ ಆಟಗಾರರಾಗಿದ್ದಾರೆ ಎಂದು ಹೇಳಿದ್ದಾರೆ.