ಭಾರತ ತಂಡದ ಶ್ರೇಷ್ಠ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಈಗಾಗಲೇ ಆಧುನಿಕ ಕ್ರಿಕೆಟ್ ದಿಗ್ಗಜ ಎನಿಸಿಕೊಂಡಿದ್ದಾರೆ. ಆ ಮೂಲಕ ಅವರನ್ನು ಸಾಕಷ್ಟು ಮಾಜಿ ಕ್ರಿಕೆಟಿಗರು ಗುಣಗಾಣ ಮಾಡಿದ್ದಾರೆ. ಅದರಂತೆ ಇದೀಗ ಇಂಗ್ಲೆಂಡ್ ವೇಗದ ಬೌಲಿಂಗ್ ದಿಗ್ಗಜ ಜೇಮ್ಸ್ ಆಂಡರ್ಸನ್ ಶ್ಲಾಘಿಸಿದ್ದಾರೆ ಹಾಗೂ ವಿರಾಟ್ ಕೊಹ್ಲಿ ವಿಶ್ವದಲ್ಲಿಯೇ ಅತ್ಯುತ್ತಮ ಚೇಸರ್ ಎಂದು ಬಣ್ಣಿಸಿದ್ದಾರೆ.
ವೈಟ್ ಬಾಲ್ ಕ್ರಿಕೆಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಚೇಸಿಂಗ್ ವಿಷಯದಲ್ಲಿ ವಿರಾಟ್ ಕೊಹ್ಲಿಯನ್ನು ಬಿಟ್ಟರೆ ಬೇರೆ ಯಾರೂ ಕೂಡ ಇಲ್ಲ ಎಂದು ಇಂಗ್ಲೆಂಡ್ ಮಾಜಿ ವೇಗಿ ಜೇಮ್ಸ್ ಆಂಡರ್ಸನ್ ಹೇಳಿದ್ದಾರೆ. ಭಾರತ ತಂಡದ ಪರ ವಿರಾಟ್ ಕೊಹ್ಲಿ ಸಾಕಷ್ಟು ಪಂದ್ಯಗಳ ಚೇಸಿಂಗ್ನಲ್ಲಿ ಗೆಲುವು ತಂದುಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿಗೆ ಚೇಸ್ ಮಾಸ್ಟರ್ ಎಂಬ ಬಿರುದನ್ನು ನೀಡಲಾಗಿದೆ.
ವಿರಾಟ್ ಕೊಹ್ಲಿ ವಿಶೇಷವಾಗಿ ಚೇಸಿಂಗ್ ವೇಳೆ ಅದ್ಭುತ ಇನಿಂಗ್ಸ್ಗಳನ್ನು ಆಡಿದ್ದಾರೆ. ಈ ಕಾರಣದಿಂದಲೇ ಅವರಿಗೆ ಚೇಸ್ ಮಾಸ್ಟರ್ ಎಂಬ ಬಿರುದನ್ನು ನೀಡಲಾಗಿದೆ. ಚೇಸಿಂಗ್ ಮೂಲಕ ಸಾಕಷ್ಟು ಪಂದ್ಯಗಳಲ್ಲಿ ಭಾರತ ತಂಡವನ್ನು ಅವರು ಗೆಲ್ಲಿಸಿದ್ದಾರೆ. 50 ಏಕದಿನ ಕ್ರಿಕೆಟ್ ಶತಕಗಳ ಪೈಕಿ 27 ಶತಕಗಳನ್ನು ಚೆಸಿಂಗ್ ವೇಳೆ ಸಿಡಿಸಿದ್ದಾರೆ. ಚೇಸಿಂಗ್ ವೇಳೆ ವಿರಾಟ್ ಕೊಹ್ಲಿ ಭಾರತ ತಂಡವನ್ನು 23 ಬಾರಿ ಗೆಲ್ಲಿಸಿದ್ದಾರೆ. ಅದೇ ರೀತಿ ಟಿ20 ಕ್ರಿಕೆಟ್ನಲ್ಲಿಯೂ ವಿರಾಟ್ ಕೊಹ್ಲಿ ಚೇಸಿಂಗ್ ವೇಳೆ 67.10ರ ಸರಾಸರಿಯಲ್ಲಿ ರನ್ಗಳನ್ನು ಕಲೆ ಹಾಕಿದ್ದಾರೆ. ಒಟ್ಟಾರೆ ಇವರ ಟಿ20ಐ ಸರಾಸರಿ 48 ರಷ್ಟಿದೆ.