ಟಿ20 ವಿಶ್ವಕಪ್ ತಂಡದಿಂದ ವಿರಾಟ್ ಕೊಹ್ಲಿ ಹೊರಗುಳಿಯುವ ಸಾಧ್ಯತೆ ಇದೆ.
ಜೂನ್ 1 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ತಂಡಗಳನ್ನು ಪ್ರಕಟಿಸಲು ಮೇ 1 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಾರ್ಚ್ ಅಂತ್ಯದೊಳಗೆ 20 ದೇಶಗಳು ತಮ್ಮ ತಂಡಗಳನ್ನು ಘೋಷಿಸಲಿದೆ.
ಆದರೆ ಈ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಮಾತ್ರ ಅನುಮಾನ.ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಜೂನ್ 1 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ತಂಡಗಳನ್ನು ಪ್ರಕಟಿಸಲು ಮೇ 1 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಾರ್ಚ್ ಅಂತ್ಯದೊಳಗೆ 20 ದೇಶಗಳು ತಮ್ಮ ತಂಡಗಳನ್ನು ಘೋಷಿಸಲಿದೆ. ಆದರೆ ಈ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಮಾತ್ರ ಅನುಮಾನ.
ಹೌದು, ಟಿ20 ವಿಶ್ವಕಪ್ ತಂಡದ ಆಯ್ಕೆಗೂ ಮುನ್ನ ಟೀಮ್ನಿಂದ ಹೊರಗುಳಿಯಲು ವಿರಾಟ್ ಕೊಹ್ಲಿಯನ್ನು ಮನವೊಲಿಸುವಂತೆ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಅಂದರೆ ಬಿಸಿಸಿಐ ಆಯ್ಕೆ ಸಮಿತಿ ಲೀಸ್ಟ್ನಲ್ಲಿ ವಿರಾಟ್ ಕೊಹ್ಲಿ ಎಂಬುದು ಖಚಿತ. ಹೀಗಾಗಿಯೇ ಖುದ್ದು ಕೊಹ್ಲಿಯೇ ತಂಡದಿಂದ ಹೊರಗುಳಿಯಲು ತಿಳಿಸಲಾಗುತ್ತಿದೆ.
ಈ ಬಾರಿಯ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್ನಲ್ಲಿ ನಿಧಾನಗತಿಯ ಪಿಚ್ಗಳಿದ್ದು, ಇದು ಕೊಹ್ಲಿಯ ಬ್ಯಾಟಿಂಗ್ಗೆ ಸರಿಹೊಂದುವುದಿಲ್ಲ. ಹೀಗಾಗಿ ಕಿರಿಯ ಆಟಗಾರರಿಗೆ ತಂಡದಲ್ಲಿ ಅವಕಾಶ ಮಾಡಿಕೊಡಲು ಕೊಹ್ಲಿಯನ್ನು ಮನವೊಲಿಸುವಂತೆ ಅಗರ್ಕರ್ ಅವರಿಗೆ ಸೂಚಿಸಲಾಗಿದೆ