ಲಂಕಾ ಸರಣಿಯಲ್ಲಿ ಕೊಹ್ಲಿ, ರೋಹಿತ್ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ.
ಕಳೆದ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ನಾಯಕ ರೋಹಿತ್ ಶರ್ಮಮತ್ತು ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ.
ರೋಹಿತ್ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್ ಕೊಹ್ಲಿಮತ್ತು ಸಚಿನ್ ತೆಂಡೂಲ್ಕರ್ ಜತೆ ಎಲೈಟ್ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ. ರೋಹಿತ್ 2 ಶತಕ ಬಾರಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಮೊದಲಿಗರು. ರೋಹಿತ್ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.
ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ