ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 6 ವಿದೇಶಿ ಪ್ರಯಾಣಿಕರಲ್ಲಿ ಸೋಂಕು ಧೃಡಪಟ್ಟಿದೆ. ಕೂಡಲೇ ಸೋಂಕಿತರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಹೆಚ್ಚಿನ ಟೆಸ್ಟ್ ಗಾಗಿ ಎಲ್ಲರ ಸ್ಯಾಂಪಲ್ ಅನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ. ಇಂಗ್ಲೆಂಡ್ ನಿಂದ ಬಂದ ಐವರಲ್ಲಿ, ಹಾಗೂ ದುಬೈನಿಂದ ಬಂದ ಒಬ್ಬರಲ್ಲಿ ಸೋಂಕು ಧೃಡಪಟ್ಟಿದ್ದು, ಅಲ್ಲದೇ ಸೋಂಕಿತರ ಜೊತೆ ಬಂದವರ ವಿಳಾಸ ಪಡೆದು ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಇನ್ನೂ ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸುವುದು ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ.
