ರಾಜ್ಯದಲ್ಲಿ ಓಮಿಕ್ರಾನ್ ಆರ್ಭಟ ಹೆಚ್ಚಾಗಿದ್ದು, ಇಂದು ಒಂದೇ ದಿನ 149 ಜನರಿಗೆ ಓಮಿಕ್ರಾನ್ ಪತ್ತೆಯಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 149 ಕೇಸ್ ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 266 ಕ್ಕೆ ಏರಿಕೆ ಆಗಿದೆ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಸಚಿವ ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟ ಮಿತಿ ಮೀರುತ್ತಿದ್ದು, ರಾಜ್ಯ ಸರ್ಕಾರ ಕೆಲವೊಂದು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ ಎಂದು ಹೇಳಲಾಗಿದೆ.
