ತುಮಕೂರು : ಕನ್ನಡ ನಿರ್ಮಾಪಕ ಕೆ.ಮಂಜು ಅವರ ಪುತ್ರ ನಟ ಶ್ರೇಯಸ್ ಮಂಜು ಅವರ ಕಾರು ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಬಳಿ ಘಟನೆ ನಡೆದಿದೆ.
ಶ್ರೇಯಸ್ ಅಭಿನಯದ ವಿಷ್ಣುಪ್ರಿಯ ಸಿನಿಮಾದ ಪ್ರಚಾರಕ್ಕಾಗಿ ದಾವಣಗೆರೆಗೆ ಹೊರಟಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಶ್ರೇಯಸ್ ಅವರ ಕಾರು ಡಿಕ್ಕಿಯಾಗಿದೆ. ಕಾರಿನನ ಸ್ವಲ್ಪ ಭಾಗಕ್ಕೆ ಹಾನಿ ಎನ್ನಲಾಗಿದೆ. ನಟ ಶ್ರೇಯಸ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಕೇಸ್ ದಾಖಲಾಗಿಲ್ಲ.