ಬೆಂಗಳೂರು: 47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದ ಕರ್ನಾಟಕದ ಆಟಗಾರರನ್ನು ಬೆಂಗಳೂರಿನ ನಿವಾಸದಲ್ಲಿ ಡಾ. ನಾರಾಯಣ ಗೌಡ ಅವರು ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಅವರು ಬುದ್ವಾರ್ ನಲ್ಲಿ ನಡೆದಿದ್ದ ಜ್ಯೂನಿಯರ್ ವಾಲಿಬಾಲ್ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಕರ್ನಾಟಕದ ಪುರುಷರ ತಂಡ ದ್ವಿತೀಯ ಸ್ಥಾನ ಪಡೆದಿರುವುದು ಖುಷಿಯ ಸಂಗತಿ ಎಂದರು. ಮುಂದಿನ ದಿನಗಳಲ್ಲಿ ಇವರಿಂದ ಇನ್ನಷ್ಟು ಸಾಧನೆಯಾಗಲಿ ಎಂದು ಆಶಿಸಿದರು.
