ಕೋಲಾರ: ಮುಖ್ಯಮಂತ್ರಿಗಳು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ರಾಜ್ಯದ ಅಭಿವೃದ್ಧಿ ಗಾಗಿ ರಾಜಕಾರಣ ನಡೆಯುತ್ತಿಲ್ಲ. ಈ ಹಿಂದೆ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಹೋರಾಟ ಮಾಡಲಾಗಿತ್ತು. ಪ್ರಸ್ತುತ ಮೂರು ಪಕ್ಷಗಳು ರಾಜಕೀಯ ಬಿಟ್ಟು ತೊಲಗಿ ಎಂದು ಕ್ರಾಂತಿ ಮಾಡ ಬೇಕಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಆಮ್‌ ಆದ್ಮಿ ಪಕ್ಷದ ವತಿಯಿಂದ ಹಮ್ಮಿ ಕೊಂಡಿರುವ ಅರಳಿಕಟ್ಟೆ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ರಾಜ್ಯದಲ್ಲಿ ಈವರೆಗೂ ಆಡಳಿತ ನಡೆಸಿದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಅಭಿವೃದ್ಧಿಗೆ ಆದ್ಯತೆ ನೀಡದೆ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿವೆ. ಜೆಡಿಎಸ್‌ ಸಂದರ್ಭಾನುಸಾರ ವಾಗಿ ಅನುಕೂಲ ಸಿಂಧು ರಾಜಕಾರಣ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ಕಳೆದ 9 ವರ್ಷಗಳಿಂದ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ. ಧಾರ್ಮಿಕ, ಕೋಮುವಾದ, ಹಿಟ್ಲರ್‌ ಮಾದರಿ ಆಡಳಿತ, ಗುಲಾಮಗಿರಿಯ ಮಂತ್ರಿಮಂಡಲ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

ರಾಜ್ಯದಲ್ಲಿ ಬರಗಾಲ ಬಂದಿದೆ. ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಜಿಎಸ್‌ಟಿ ಹಣ ನೀಡುತ್ತಾರೆ. ಆದರೆ ನಮಗೆ ಏಕೆ ನೀಡುತ್ತಿಲ್ಲ? ಈ ಸರಕಾರವನ್ನು ಅಭದ್ರ ಗೊಳಿಸಲು ಹಣ ನೀಡುತ್ತಿಲ್ಲ. ಎಲ್ಲ ಸೌಲಭ್ಯಗಳನ್ನು ನೀಡಲು ನಿಮ್ಮಿಂದ ಆಗುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲಿನ ಅಭಿಮಾನದಿಂದ ಮತ ನೀಡಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಉದ್ದೇಶದಿಂದ ಕಾಂಗ್ರೆಸ್‌ಗೆ ಮತ ನೀಡಿದ್ದಾರೆ.

ಆಮ್‌ ಆದ್ಮಿ ಪಕ್ಷ ದೆಹಲಿ, ಪಂಜಾಬ್‌ ಸರಕಾರದ ಆಡಳಿತದಲ್ಲಿ ಕೈಗೊಂಡಿರುವ ಆರೋಗ್ಯ, ಶಿಕ್ಷಣ, ಮೂಲಭೂತ ಸೌಕ ರ್ಯಗಳನ್ನು ರಾಜ್ಯದಲ್ಲೂ ಅನುಷ್ಠಾನ ಗೊಳಿಸುವ ಉದ್ದೇಶದಿಂದ ಪಕ್ಷದ ವತಿ ಯಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದ ಜನರ ಬಳಿಗೆ ತೆರಳಿ ಮೂಲಭೂತ ಸಮಸ್ಯೆಗಳ ಬಗ್ಗೆ ಅವರೊಂದಿಗೆ ಮುಕ್ತವಾಗಿ ಚರ್ಚಿಸಿ ಸಮಸ್ಯೆ ಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ಉದ್ದೇಶದಿಂದ ಪಕ್ಷದಿಂದ ಅರಳಿಕಟ್ಟೆ ಎಂಬ ಯೋಜನೆ ರೂಪಿಸಲಾಗಿದೆ ಎಂದರು.

Share.