ಮಂಡ್ಯ:- ಜಿಲ್ಲೆಯ ಮದ್ದೂರಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಸಮನ್ವಯ ಸಭೆ ಜರುಗಿದೆ.
ಮದ್ದೂರು ಪಟ್ಟಣದ ಹೊರ ವಲಯದ ಖಾಸಗಿ ಭವನದ ಪ್ರಚಾರದ ಸಭೆಯಲ್ಲಿ ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಭಾಗಿಯಾಗಿ ಮಾತನಾಡಿದರು.
ಲೋಕಸಭಾ ಚುನಾವಣೆ ಒಬ್ಬ ಹಣವಂತ, ಒಬ್ಬ ಗುಣವಂತನ ಮೇಲೆ ನಡೆಯುತ್ತಿದೆ. ಮತದಾರರು ಕುಮಾರಣ್ಣನಿಗೆ ಬಹುಮತದಿಂದ ಆಶೀರ್ವಾದ ಮಾಡಬೇಕು. ಲೋಕಸಭಾ ಚುನಾವಣಾ ಪ್ರಕ್ರಿಯೆ ಪ್ರಾರಂಭಕ್ಕೂ ಮುನ್ನ ರಾಷ್ಟ್ರ ಮಟ್ಟದ ಬಿಜೆಪಿ ನಾಯಕರನ್ನ ಭೇಟಿ ಮಾಡಿ ನೀವು ಕೇಳುವ ಕ್ಷೇತ್ರ ಬಿಟ್ಟುಕೊಡುವ ಬಗ್ಹೆ ಹೇಳಿದ್ರು.
ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಿಂದ ಜೆಡಿಎಸ್ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈ ಮೂವರು ಅಭ್ಯರ್ಥಿಗಳು ಜಯಭೇರಿ ಭಾರಿಸುವಲ್ಲಿ ಯಾವುದೇ ಅನುಮಾನವಿಲ್ಲ.
ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಯಲಿದೆ. ಈ ಬಗ್ಗೆ ರೈತರಿಗೆ ಯಾವುದೇ ಅನುಮಾನ ಬೇಡ.
ಮೈತ್ರಿ ಅಭ್ಯರ್ಥಿಗೆ ತಳಮಟ್ಟದಿಂದ ಕೆಲಸ ಮಾಡಬೇಕಿದೆ. 62 ವರ್ಷಗಳ ಸುದೀರ್ಘ ಸಮಯದಿಂದ ಪಕ್ಷವನ್ನು ಕಟ್ಟಲಾಗಿದೆ. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಪಕ್ಷದ ಜೊತೆ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮ ಪಡಬೇಕಿದೆ. ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ಕುಮಾರಸ್ವಾಮಿ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.
2019 ರ ಸೋಲು ಕಾರ್ಯಕರ್ತರ ಸೋಲಾಗಿದೆ. ಜಿಲ್ಲೆಯಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಅವರ ಸರ್ಕಾರ ಇರಲಿಲ್ಲ. 6ಕೋಟಿ ಕನ್ನಡಿಗರ ಆಶೀರ್ವಾದ ಇದ್ದರೆ ರೈತರ ಸಾಲ ಮನ್ನಾ ಮಾಡ್ತಿವಿ ಅಂತ ಹೇಳಿದ್ರು. ಆದರೆ ನಮಗೆ 36 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವು. ನಾವು ಯಾರ ಮನೆ ಬಾಗಿಲಿಗೆ ಹೋಗಿರಲಿಲ್ಲ. ಆದರೆ ದೆಹಲಿ ದೊರೆಗಳು ತಮ್ಮ ಮನೆಯ ಬಳಿ ಬಂದು ಬಿಜೆಪಿ ನಾಯಕರ ಜೊತೆ ಕೈ ಜೋಡಿಸಬೇಡಿ ಎಂದು ಮುಖ್ಯಮಂತ್ರಿ ಮಾಡಿದರು.
ರಾಜ್ಯದ ಆರ್ಥಿಕ ಪರಿಸ್ಥಿಯನ್ನು ಅರ್ಥ ಮಾಡಿಕೊಂಡು ರೈತರ ಸಾಲ ಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಜೊತೆ ಮೈತ್ರಿಯಾಗಿತ್ತು. 90 ವರ್ಷದ ಹಿರಿಯ ಜೀವಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಸ್ಪರ್ಧೆ ಮಾಡಿಸಿ ಬೆನ್ನಿಗೆ ಚೂರಿ ಹಾಕಿದರು. ಜಿಲ್ಲೆಯಲ್ಲಿ ಫಲಾನುಭವಿಗಳ ಸಭೆಯನ್ನು ತರಾತುರಿಯಲ್ಲಿ ಮಾಡಿದ್ದಾರೆ. ನನ್ನ ಸೋಲಿಸೋಕೆ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಬೆಂಬಲ ನೀಡಿದ್ದಿರಿ. 2019 ರ ಕಹಿ ಘಟನೆ ಮರುಕಳಿಸಬಾರದು.
ಜಿಲ್ಲೆಯಲ್ಲಿ ಮೈತ್ರಿ ಧರ್ಮ ಪಾಲನೆಯಾಗಬೇಕು. ಖರ್ಗೆ ಅವರು ಸಿಎಂ ಆಗ್ಬೇಕು ಅಂತ ದೇವೆಗೌಡರು ಬೆಂಬಲ ಕೊಟ್ಟಿದ್ದರು. ಪ್ರಥಮ ಬಾರಿಗೆ ಬಿಜೆಪಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಕುಮಾರಸ್ವಾಮಿ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ್ರು. 20 ತಿಂಗಳ ಆಡಳಿತದಲ್ಲಿ ಜನತಾ ದರ್ಶನ ಎಂಬ ಬೃಹತ್ ಕಾರ್ಯಕ್ರಮ ಜನಮಾನಸದಲ್ಲಿ ಉಳಿದಿದೆ.
ಗ್ರಾಮ ವಾಸ್ತವ್ಯ ಎಂಬ ಜನಪರವಾದ ಕಾರ್ಯಕ್ರಮ. ಹೆಚ್ಐವಿ ರೋಗಿಯ ಮನೆಯಲ್ಲಿ ವಾಸ್ತವ್ಯ ಮಾಡಿದ್ರು. ಇಂತಹ ಜನಪರ ಕಾರ್ಯಕ್ರಮಗಳನ್ನು ನೀಡಿದ್ರೆ ಅದು ಕುಮಾರಸ್ವಾಮಿ.
ರಾಜ್ಯದಲ್ಲಿ ಇಂದು ಇಬ್ಬರು ಹೃದಯವಂತರು ಸ್ಪರ್ಧೆ ಮಾಡುತ್ತಿದ್ದಾರೆ. ಸಾವಿರಾರು ಜೀವಗಳನ್ನು ಉಳಿಸಿದ ಡಾ.ಮಂಜುನಾಥ್ ಸ್ಪರ್ಧೆ ಮಾಡ್ತಿದ್ದಾರೆ. ಮಂಡ್ಯದ ಸಾವಿರಾರು ಹೃದಯಗಳಲ್ಲಿರುವ ಕುಮಾರಣ್ಣ ಸ್ಪರ್ಧೆ ಮಾಡ್ತಿದ್ದಾರೆ. ಅಧಿಕಾರ ತಾತ್ಕಾಲಿಕ, ಅಧಿಕಾರದ ಮದ, ಕಾಂಗ್ರೆಸ್ ನಾಯಕರಿಗೆ ತುಂಬಿ ಹೋಗಿದೆ. ಮಂಡ್ಯದಲ್ಲಿ ಯಾರು ಗಂಡಸರು ಇಲ್ವಾ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಕೆ.ಟಿ.ಶ್ರೀಕಂಠಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ಮನ್ ಮಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ರೂಪ, ಚುನಾವಣಾ ಉಸ್ತುವಾರಿ ಸುನೀಲ್ ಕುಮಾರ್, ಜಿ.ಪಂ ಮಾಜಿ ಅಧ್ಯಕ್ಷ ಗುರುಚರಣ್, ಬಿಜೆಪಿ ಮುಖಂಡ ಮುನಿರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ ಮುಖಂಡರಾದ ಸಿ.ಪಿ.ಉಮೇಶ್, ಮಾದನಾಯಕನಹಳ್ಳಿ ರಾಜಣ್ಣ, ತಾಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಬಿಜೆಪಿ ತಾ ಅಧ್ಯಕ್ಷ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವ್, ದೇವರಹಳ್ಳಿ ವೆಂಕಟೇಶ್ ಮತ್ತಿತರರು ಇದ್ದರು