ಹಾವೇರಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಎರಡನೇ ಹಂತದ ಮತದಾನ ಮುಕ್ತಾಯವಾಗಿದ್ದು, ಮತದಾನ ಬಹುತೇಕ ಶಾಂತಿಯುತವಾಗಿತ್ತು. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆದಿದೆ. ಅಭ್ಯರ್ಥಿಗಳ ಭವಿಷ್ಯ ಇದೀಗ ಇವಿಎಂಗಳಲ್ಲಿ ಭದ್ರವಾಗಿ ಸ್ಟ್ರಾಂಗ್ ರೂಂ ಸೇರಿದೆ.
ಹೌದು ಹಾವೇರಿಯ ದೇವಗಿರಿಯಲ್ಲಿರುವ ಸರಕಾರಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿರುವ ಸ್ಟ್ರಾಂಗ್ ರೂಮ್ʼನಲ್ಲಿ ಹಾವೇರಿ, ಗದಗ, ರೋಣ, ಶಿರಹಟ್ಟಿ, ಬ್ಯಾಡಗಿ, ಹಾನಗಲ್, ರಾಣೇಬೆನ್ನೂರ, ಹಿರೆಕೇರೂರ ವಿಧಾನ ಸಭಾ ಕ್ಷೇತ್ರ ಒಳಗೊಂಡಿರುವ ಹಾವೇರಿ ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
2019ರ ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತ ಈ ಬಾರಿ ಶೇಕಡಾವಾರು ಪ್ರಮಾಣ ಅಧಿಕವಾಗಿದೆ. ಕಳೆದ ಚುನಾವಣೆಯಲ್ಲಿ ಶೇ.68.66ರಷ್ಟು ಮತದಾನವಾಗಿದ್ದರೆ, ಈ ಬಾರಿ ಶೇ.70.03 ಮತದಾನವಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)