ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ ಆಗಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅಲಭ್ಯರಾಗಲಿದ್ದಾರೆ.
ಮೋದಿ ತಮ್ಮ ಪ್ರಭಾವ ಬಳಸಿ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು: ಝೆಲೆನ್ಸ್ಕಿ
ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ ಸರಣಿಗಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನವೆಂಬರ್ 8 ರಿಂದ ಆರಂಭವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಸಾಯಿರಾಜ್ ಬಹುತುಲೆ, ಹೃಷಿಕೇಶ್ ಕಾನಿಟ್ಕರ್ ಮತ್ತು ಸುಭದೀಪ್ ಘೋಷ್ ಅವರು ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ಕೂಡ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ತಾತ್ಕಾಲಿಕ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಂಡಿದ್ದರು. ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯ ವೇಳೆ ಲಕ್ಷ್ಮಣ್ ಅವರನ್ನು ಹಲವು ಸರಣಿಗಳಿಗೆ ಕೋಚ್ ಆಗಿ ನೇಮಿಸಲಾಗಿತ್ತು. ಇದೀಗ ಎನ್ಸಿಎ ಮುಖ್ಯಸ್ಥನ ಹುದ್ದೆಯಲ್ಲಿ ಮುಂದುವರೆದಿರುವ ಲಕ್ಷ್ಮಣ್ ಅವರು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳೆ ತಂಡದ ಕೋಚಿಂಗ್ ಜವಾಬ್ದಾರಿಯನ್ನು ಹೆಗಲೇರಿಸಿಕೊಳ್ಳಲಿದ್ದಾರೆ.