ಸ್ಯಾಂಡಲ್ ವುಡ್ ನಟಿ ಅಮೂಲ್ಯ ಪತಿ ಜಗದೀಶ್ ಅವರ ಜೊತೆ ಆರ್.ಆರ್ ನಗರದ ಮತ ಕೇಂದ್ರಕ್ಕೆ ಆಗಮಿಸಿ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಸರದಿ ಸಾಲಿನಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ನಿಂತಿದ್ದ ನಟಿ ಆ ಬಳಿಕ ಸರತಿ ಸಾಲಿನಲ್ಲಿ ನಿಂತಿದ್ದವರಿಗೆ ಮನವಿ ಮಾಡಿಕೊಂಡು ಹೋಗಿ ವೋಟು ಹಾಕಿದ್ದಾರೆ.
ಬಳಿಕ ಮಾತನಾಡಿದ ಅಮೂಲ್ಯ, ತುಂಬಾ ಕ್ಯೂ ಇದೆ. ಇಷ್ಟು ಜನ ನೋಡಿ ಖುಷಿಯಾಯ್ತು. ಮಕ್ಕಳಿರೋದ್ರಿಂದ ರಿಕ್ವೆಸ್ಟ್ ಮಾಡಿದೆ, ಬೇಗ ಬಿಟ್ರು. ಆದ್ರೂ ಅರ್ಧ ಗಂಟೆ ಇದ್ದೆ. ಇದು ನಮ್ಮ ಹಕ್ಕು. ನಾವು ವೋಟ್ ಮಾಡಲೇಬೇಕು. ಸಮಯ ವ್ಯರ್ಥ ಮಾಡದೆ, ವೋಟ್ ಮಾಡಬೇಕು. ಈ ಬಾರಿ ಹೆಚ್ಚು ಮತದಾನ ಆಗುತ್ತೆ ಅಂದ್ಕೊಂಡಿದ್ದೇನೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ಇನ್ನೂ ನಟ ಗಣೇಶ್ ಪತ್ನಿ ಶಿಲ್ಪಾ ಅವರೊಂದಿಗೆ ಆರ್.ಆರ್ ನಗರದ ಬೂತ್ ಗೆ ಆಗಮಿಸಿ ಮತದಾನ ಮಾಡಿದರು. ದಂಪತಿ ಸಮೇತ ಬೆಳಗ್ಗೆ 7.20ಕ್ಕೆ ಆಗಮಿಸಿದ್ದ ಗಣೇಶ್ ಮತದಾನ ಮಾಡಿ ಮಾದರಿಯಾದರು. ತಪ್ಪದೇ ಎಲ್ಲರೂ ಮತದಾನದಲ್ಲಿ ಭಾಗಿಯಾಗಿ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)