ಚಂಡೀಗಢ:- ಯೋಧರ ಪಿಂಚಣಿ ಬಾಕಿ ಉಳಿಸಿಕೊಂಡ ಕೇಂದ್ರ ಸರ್ಕಾರ ವಿರುದ್ಧ ಪಂಜಾಬ್ ಹೈಕೋರ್ಟ್ ಕೆಂಡಾಮಂಡಲವಾಗಿದ್ದಾರೆ.
IPL 2025: ಕಳಪೆ ಪ್ರದರ್ಶನದಿಂದ ಫಾರ್ಮ್ ಗೆ ಮರಳಿದ RCB ಆಟಗಾರ! ಸಾಲ್ಟ್ ಬ್ಯಾಟಿಂಗ್ ಗೆ ಫ್ಯಾನ್ಸ್ ಫಿದಾ!
ಭಾರತ-ಪಾಕಿಸ್ತಾನ ನಡುವೆ 1965ರಲ್ಲಿ ನಡೆದಿದ್ದ ಯುದ್ಧದಲ್ಲಿ ಹೋರಾಡಿ ವೀರ ಚಕ್ರ ಪುರಸ್ಕಾರಕ್ಕೆ ಭಾಜನರಾಗಿರುವ ಯೋಧರ ಪಿಂಚಣಿ ಬಾಕಿಯನ್ನು ಸಶಸ್ತ್ರ ಪಡೆಗಳ ನ್ಯಾಯಮಂಡಳಿ ಆದೇಶದಂತೆ ಒಂದು ತಿಂಗಳೊಳಗೆ ಪಾವತಿಸಬೇಕು. ಇಲ್ಲದೇ ಹೋದರೆ ಶೇ.15ರಷ್ಟು ಬಡ್ಡಿ ತೆರಬೇಕಾಗುತ್ತದೆ ಎಂದರು.
ಈ ಸಂಬಂಧ 2018 ರಲ್ಲಿಯೇ ತೀರ್ಪು ನೀಡಲಾಗಿದ್ದರೂ 7 ವರ್ಷಗಳಿಂದ ಬಾಕಿ ಮೊತ್ತ ಪಾವತಿಸದೇ ಇರುವ ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ನ್ಯಾ. ಸಂಜೀವ್ ಪ್ರಕಾಶ್ ಶರ್ಮಾ ಮತ್ತು ಮೀನಾಕ್ಷಿ ಐ ಮೆಹ್ತಾ ಅವರಿದ್ದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಪುರುಷೋತ್ತಮ್ ದಾಸ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಆಧರಿಸಿ ಸಶಸ್ತ್ರ ಪಡೆಗಳ ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿ ಪದೇ ಪದೇ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ