ಉಡುಪಿ:– ಮಲ್ಪೆ ಬೀಚ್ ನಲ್ಲಿ ಅಲೆಗಳ ಆರ್ಭಟದ ಸುಳಿಗೆ ಸಿಲುಕಿದ ಮೂವರಲ್ಲಿ ಓರ್ವ ಸಾವನ್ನಪ್ಪಿದ ಘಟನೆ ಜರುಗಿದೆ.
ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು, ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ -ನಿಖಿಲ್ ಕುಮಾರಸ್ವಾಮಿ
ಪ್ರವಾಸಕ್ಕೆ ಬಂದ ಕುಟುಂಬವೊಂದರ ಮೂವರು ನೀರಿಗೆ ಇಳಿದಿದ್ದರು. ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ಈ ವೇಳೆ ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿ, ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು. ಆದರೆ, ಮೂರನೇ ವ್ಯಕ್ತಿ ನೀರಿನ ಅಲೆಗೆ ಸಿಲುಕಿರುವುದು ಅರಿವಿಗೆ ಬರುವುದು ತಡವಾಗಿದ್ದ ಹಿನ್ನಲೆ ಆತನನ್ನು ಮೇಲಕ್ಕೆತ್ತಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಲೇ ಸಾಕಷ್ಟು ನೀರು ಕುಡಿದಿದ್ದ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದಾನೆ. ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ.
ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್ಗೆ ಬಂದಿತ್ತು. ಈ ಪೈಕಿ 42 ವರ್ಷ ಪ್ರಾಯದ ಅನಂತ ಗೌಡ, 27 ವರ್ಷ ಪ್ರಾಯದ ಸಂತೋಷ್ ಹಾಗೂ 26 ವರ್ಷ ದ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.