ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಜೈಲು ಸೇರಿರುವ ದರ್ಶನ್ರನ್ನು ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಭೇಟಿ ಮಾಡಿದ್ದಾರೆ.
ದರ್ಶನ್ ಭೇಟಿ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಅವರೇನು ತಪ್ಪು ಮಾಡಿಲ್ಲ ಅನ್ನೋ ನಂಬಿಕೆ ನನ್ನದು, ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ. ದರ್ಶನ್ ಅವರಿಗಿಂತ ನಾವೇ ವೀಕ್ ಆಗಿದ್ದೇವೆ. ಅವರಿಗೆ ಜ್ವರ ಇತ್ತು ಈಗ ರಿಕವರಿ ಆಗಿದ್ದಾರೆ. ಇನ್ನು ನನ್ನ ಮತ್ತು ಸೋನಲ್ ವಿಚಾರ ಅವರಿಗೆ ಮೊದಲೇ ತಿಳಿದಿತ್ತು. ದರ್ಶನ್ ಅವರೇ ನಮ್ಮ ಮದುವೆ ಡೇಟ್ ಫಿಕ್ಸ್ ಮಾಡಿದ್ದು ಎಂದಿದ್ದಾರೆ. ನನ್ನ ಸಲುವಾಗಿ ಮದುವೆ ಡೇಟ್ ಬದಲಾವಣೆ ಮಾಡೋದು ಬೇಡ ಅಂತ ಹೇಳಿದ್ದಾರೆ. ಅವರು ಏನು ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ನಮಗೂ ಇದೆ.
ಜೈಲಿನಲ್ಲಿ ದರ್ಶನ್ ಭೇಟಿಯಾಗಿ ಮದುವೆಗೆ ಆಶೀರ್ವಾದ ಪಡೆದ ನಿರ್ದೇಶಕ ತರುಣ್ ಸುಧೀರ್
ನಮ್ಮನ್ನು ಹೆಚ್ಚಾಗಿ ಪ್ರೀತಿಸುವವರ ಮೇಲೆಯೇ ನಮಗೆ ನಂಬಿಕೆ ಹೆಚ್ಚಾಗಿರುತ್ತದೆ. ನಮ್ಮ ಮದುವೆ ದಿನಾಂಕದ ಮುಂಚೆಯೇ ಅವರು ಹೊರಗೆ ಬರುತ್ತಾರೆ ಎನ್ನುವ ಭರವಸೆಯಿದೆ. ಅವರಿಗೆ ಮದುವೆ ಪತ್ರಿಕೆ ಏನು ಕೊಟ್ಟಿಲ್ಲ. ಅದಕ್ಕೆ ಜೈಲಿನಲ್ಲಿ ಅನುಮತಿ ಇಲ್ಲ. ಈಗ ದರ್ಶನ್ ಅವರ ಆಶೀರ್ವಾದ ಪಡೆದು ಬಂದಿದ್ದೇನೆ ಎಂದಿದ್ದಾರೆ. ಈ ವೇಳೆ, ಮನೆ ಊಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ನಗು ಮುಖದಲ್ಲೇ ಉತ್ತರ ಕೊಟ್ಟಿದ್ದಾರೆ. ದರ್ಶನ್ ಅವರು ತೂಕ ಕಮ್ಮಿ ಆದವರ ಹಾಗೆ ಕಾಣುತ್ತಿದ್ದಾರೆ ಎಂದಿದ್ದಾರೆ.