AICC ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅದೇನಂದರೆ ಆಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
ಆ ನಂತರ ಮಾಧ್ಯಮಗಳ ಬಳಿ ಮಾತನಾಡಿದ ಅವರು ಸಚಿನ್ ಪೈಲಟ್ ಪಕ್ಷ ಬಿಡುವುದು ನಮಗ್ಯಾರಿಗೂ ಇಷ್ಟವಿಲ್ಲ ಎಂದಿದ್ದಾರೆ.

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನ ನಡೆಸುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೆ ಕೆಸಿ ವೇಣುಗೋಪಾಲ್ ರಾಜಸ್ಥಾನಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.
ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಮುಂದಿನ ರಾಜಕೀಯ ನಡೆಯ ಮೇಲೆ ಎಲ್ಲರ ಚಿತ್ತವಿದೆ. ಕಾಂಗ್ರೆಸ್ನಲ್ಲಿಯೇ ಉಳಿಯುತ್ತಾರೋ ಅಥವಾ ಬಿಜೆಪಿ ಜತೆಗೆ ಕೈಜೋಡಿಸುತ್ತಾರೋ ಕಾದುನೋಡಬೇಕಿದೆ.
