ಬೆಂಗಳೂರು: ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು. ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ.ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.