ಕೊಪ್ಪಳ: ಗ್ಯಾರಂಟಿ ಯೋಜನೆಗಳಿಗೆ ಜನರ ತೆರಿಗೆ ಹಣವನ್ನೇ ನಾವು ಕೊಡುತ್ತಿದ್ದೇವೆ ಎಂದು ಸಚಿವ ಎನ್.ಎಸ್ ಬೋಸರಾಜು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿರುವುದು ಸುಳ್ಳು ಆರೋಪ. ಗ್ಯಾರಂಟಿ ಯೋಜನೆಗಳಿಗೆ ಕೂಡಾ ಜನರ ತೆರಿಗೆ ಹಣವನ್ನೇ ನಾವು ಕೊಡುತ್ತಿದ್ದೇವೆ. ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ? ಡೀಸೆಲ್ ಬೆಲೆ ಹೆಚ್ಚಳವಾಗಿದೆ, ಖರ್ಚು ವೆಚ್ಚ ಹೆಚ್ಚಾಗಿದೆ. ಹೀಗಾಗಿ ಬಸ್ ದರ ಹೆಚ್ಚಳ ಮಾಡುತ್ತಿದ್ದಾರೆ ಎಂದು ಹೇಳಿದರು.
ಚಳಿಗಾಲದಲ್ಲೇ ಏಕೆ ಜಾಸ್ತಿ ಸೆಕ್ಸ್ ಮಾಡಬೇಕು ಅನಿಸುತ್ತೆ ಗೊತ್ತಾ..? ಇದಕ್ಕೆ ಕಾರಣ ಇಲ್ಲಿದೆ ನೋಡಿ
ಸಂಪುಟ ಪುನಾರಚನೆ ವಿಚಾರವಾಗಿ, ಖಾಲಿ ಇರುವ ಹುದ್ದೆ ಮಾತ್ರ ಭರ್ತಿ ಎಂದು ಸಿಎಂ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಬಗ್ಗೆ ಅಪಾರ್ಥ ಕಲ್ಪಿಸೋದು ಬೇಡ. ನಿನ್ನೆ ಕ್ಯಾಬಿನೆಟ್ ನಂತರ ಎಲ್ಲರನ್ನು ಊಟಕ್ಕೆ ಕರೆದಿದ್ದರು. ಬೆಂಗಳೂರಿನಲ್ಲಿ ಇದ್ದವರು ಊಟ ಮಾಡಿ ಬಂದಿದ್ದಾರೆ.
ಇನ್ನೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ಪ್ರಹ್ಲಾದ್ ಜೋಶಿ ಸಹೋದರನ ಮೇಲೆ ಆರೋಪ ಬಂದಿತ್ತು. ಹಾಗಂತ ಪ್ರಹ್ಲಾದ್ ಜೋಶಿ ರಾಜೀನಾಮೆ ನೀಡಿದ್ರಾ? ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಿದ್ರಾ? ಸರ್ಕಾರದ ಬಗ್ಗೆ ಮಾತನಾಡೋಕೆ ಬಿಜೆಪಿಯವರಿಗೆ ಏನು ಸಿಗ್ತಿಲ್ಲ. ಹೀಗಾಗಿ ಹೆಸರೇ ಇಲ್ಲದೇ ಇದ್ದರೂ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಹೇಳಿದರು.