ಮೈಸೂರು:- ಶಾಸಕ ಯತ್ನಾಳ್ ವಿರುದ್ಧ ನಾವು ಕ್ರಮಕೈಗೊಳ್ಳಲು ಆಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬಸನಗೌಡ ಯತ್ನಾಳ್ ಶಾಸಕರು, ಕೇಂದ್ರದಲ್ಲಿ ಮಂತ್ರಿಯಾಗಿದ್ದವರು. ಹೀಗಾಗಿ ಯತ್ನಾಳ್ ವಿರುದ್ಧ ನಾವು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಕೇಂದ್ರದವರು ಎರಡು ಬಾರಿ ಕರೆಸಿ ಮಾತನಾಡಿದ್ದಾರೆ. ಮುಂದಿನ ವಾರ ರಾಜ್ಯ ಬಿಜೆಪಿ ಉಸ್ತುವಾರಿಗಳು ಆಗಮಿಸುತ್ತಿದ್ದಾರೆ. ಆಗ ಶಾಸಕ ಯತ್ನಾಳ್ರನ್ನು ಕರೆಸಿ ಮಾತನಾಡುತ್ತಾರೆ. ನಂತರ ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕರ್ನಾಟಕ ರಾಜ್ಯ ಬಿಜೆಪಿಯಿಂದ, ಯತ್ನಾಳ್ ವಿರುದ್ಧ ಯಾವುದೇ ಕ್ರಮಕೈಗೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನು ಆರ್ ಅಶೋಕ್ ಒಪ್ಪಿಕೊಂಡಿದ್ದಾರೆ.
ಇದನ್ನು ಇದೇ ವೇಳೆ ಮಂಡ್ಯದಲ್ಲಿ ಪ್ರೀತಂಗೌಡ-JDS ಕಾರ್ಯಕರ್ತರ ಗಲಾಟೆ ಬಗ್ಗೆ ಮಾತನಾಡಿ, ಪ್ರೀತಂಗೌಡ ಕೂಡ ನಮ್ಮ ಪಕ್ಷದ ಕಾರ್ಯಕರ್ತನೇ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಬಿಜೆಪಿ-ಜೆಡಿಎಸ್ ಒಂದಾಗಿ ಹೋಗುತ್ತಿದ್ದೇವೆ. ಹೀಗಾಗಿ ಕೆಲವು ಸಣ್ಣಪುಟ್ಟ ಲೋಪದೋಷ ಆಗುವುದು ಸಹಜ. ಇದನ್ನೆಲ್ಲ ಸರಿಪಡಿಸಿಕೊಂಡು ಮುಂದೆ ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.