ಬೆಂಗಳೂರು:- 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಪರಿಷತ್ನಲ್ಲಿ ಬಿಜೆಪಿ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಸಿಎಂ ಅಂಕಿ ಅಂಶ ಸಮೇತ ಉತ್ತರಿಸಿದರು. 2023-24ರ ಅವಧಿಯಲ್ಲಿ ನಮ್ಮದು ಒಟ್ಟು ಸಾಲ 90,280 ಕೋಟಿ ರೂ. ಇತ್ತು. 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ನಮ್ಮದು ಸಾಲದ ಪ್ರಮಾಣ ಕಡಿಮೆ ಇದೆ ಎಂದರು.
ಸಾಮರ್ಥ್ಯ ನೋಡಿಕೊಂಡು ಸಾಲ ಮಾಡಬೇಕು. ಎಷ್ಟು ಸಾಲ ಕೊಡಬೇಕು ಅಂತ ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ. ಅದರ ಪ್ರಕಾರ ನಾವು ಸಾಲ ಪಡೆಯುತ್ತೇವೆ, ಸಾಲದ ಮಿತಿ ಕೊಟ್ಟಷ್ಟು ಸಾಲ ಪಡೆದಿದ್ದೇವೆ. ನಿಯಮದ ಪ್ರಕಾರ 3 ಮಾನದಂಡ ನಿಗದಿಯಾಗಿದೆ. ನಮ್ಮಲ್ಲಿ ವಿತ್ತೀಯ ಕೊರತೆಯು
2024-25ರಲ್ಲಿ 2.9% ಇದೆ, 2023-24ರಲ್ಲಿ 2.6% ಇತ್ತು ಎಂದು ತಿಳಿಸಿದರು.
2023-24 ರಲ್ಲಿ ನಮ್ಮದು ಒಟ್ಟು ಸಾಲ 90,280 ಕೋಟಿ ರೂ. ಇತ್ತು. 2024-25ರಲ್ಲಿ 1.4 ಲಕ್ಷ ಕೋಟಿ ರೂ. ಸಾಲ ಮಾಡಿದ್ದೇವೆ. ಆಂಧ್ರ, ಅಸ್ಸಾಂ, ಹಿಮಾಲಯ ಪ್ರದೇಶ, ಕೇರಳ, ಮಹಾರಾಷ್ಟ್ರ, ಮಧ್ಯ ಪ್ರದೇಶ, ತಮಿಳುನಾಡು ಸೇರಿ ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ನಮ್ಮ ಸಾಲದ ಪ್ರಮಾಣ ಕಡಿಮೆ ಎಂದು ಸಿಎಂ ಹೇಳಿದರು.