ಬೆಂಗಳೂರು:- ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಒಬ್ಬೊಬ್ಬರೇ ಸಾವು, ದೇಗುಲ ನೆಲಸಮಕ್ಕೆ ನಿರ್ಧಾರ!
ಸಾರಿಗೆ ಮುಷ್ಕರ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಸೇರಿದಂತೆ ಕೆಎಸ್ಆರ್ಟಿಸಿ, ಬಿಎಂಟಿಸಿ ವಾಯವ್ಯ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಎಂಡಿಗಳ ಜೊತೆ ಸಭೆ ನಡೆಸಿದ್ರು.
ಬಳಿಕ ಮಾತನಾಡಿದ ಅವರು, 13 ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ, ಬಿಜೆಪಿ ಸರ್ಕಾರ 5,900 ಕೋಟಿ ಸಾಲ ಬಿಟ್ಟು ಹೋಗಿದ್ದಾರೆ. ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಸಂಕ್ರಾಂತಿ ನಂತರ ಸಿಎಂ ಜೊತೆ ಸಭೆ ಮಾಡ್ತೇವೆ ಎಂದರು.
ಸಿಎಂ 2,000 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಬಜೆಟ್ನಲ್ಲಿ ಉಳಿದ ಮೊತ್ತ ಕೊಡ್ತಾರೆ. ಪ್ರಣಾಳಿಕೆಯಲ್ಲೂ ಸಮಾನ ವೇತನ ಅಂತ ಹೇಳಿದ್ದೇವೆ. ಬಸ್ ನಿಲ್ಲಿಸಬಾರದು. ಸಾರ್ವಜನಿಕರ ಹಿತದೃಷ್ಟಿಯಿಂದ ಕೈಬಿಡಿ ಅಂತ ಮನವಿ ಮಾಡಿದರು. ಅಲ್ಲದೇ, ಟಿಕೆಟ್ ದರ ಏರಿಕೆ ಬಗ್ಗೆ ಸಲಹೆ ಕೊಡಬಹುದು. ಎಷ್ಟು ಏರಿಕೆ ಮಾಡ್ಬೋದು ಅಂತ 4 ಬೋರ್ಡ್ಗಳು ಪ್ರಸ್ತಾವನೆ ಸಲ್ಲಿಸಬಹುದು. ನಾಳೆ ಜಂಟಿ ಕ್ರಿಯಾ ಸಮಿತಿ ಜೊತೆ ಸಿಎಂ ಮಾತುಕತೆ ನಡೆಸ್ತಾರೆ ಅಂತ ರಾಮಲಿಂಗಾರೆಡ್ಡಿ ಹೇಳಿದ್ರು.