ಗಾಂಧಿನಗರ: ಹವಾಮಾನ ವೈಪರೀತ್ಯದ ಸಮಸ್ಯೆ ಭೂಮಿಯ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಹೀಗಾಗೀ ನವೀಕರಿಸಬಹುದಾದ ಇಂಧನದಲ್ಲಿ ಆಸಕ್ತಿ ತೋರಿಸುವುದು ಒಂದು ಆಯ್ಕೆಯಲ್ಲ ಅದು ಪ್ರಪಂಚದ ಅನಿವಾರ್ಯವಾಗಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು.
ನಾಲ್ಕನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಭೂಮಿಯನ್ನು ಉಳಿಸಲು, ನವೀಕರಿಸಬಹುದಾದ ಇಂಧನದಲ್ಲಿ ಹೂಡಿಕೆ ಮಾಡದೆ ನಮಗೆ ಬೇರೆ ದಾರಿಯಿಲ್ಲ ಮತ್ತು ಹವಾಮಾನ ಬದಲಾವಣೆಯ ಬೆದರಿಕೆಯನ್ನು ಎದುರಿಸಲು ನಾವು ಹಗಲಿರುಳು ಶ್ರಮಿಸಬೇಕಾಗಿದೆ ಎಂದರು.
ನೀವು ಆಸ್ತಿ ಪತ್ರ ಕಳೆದುಕೊಂಡಿದ್ದೀರಾ..? ಚಿಂತೆ ಬಿಡಿ – ಇಲ್ಲಿದೆ ನೋಡಿ ಸುಲಭ ಪರಿಹಾರ
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವಕ್ಕೆ ಮುಂಚೂಣಿಯಲ್ಲಿದೆ, ಹವಾಮಾನ ಬದಲಾವಣೆಯ ಸಮಸ್ಯೆಯನ್ನು ಎದುರಿಸಲು, ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ಭಾರತದ ಉಪಕ್ರಮದ ಮೇಲೆ ಸೌರ ಒಕ್ಕೂಟವನ್ನು ರಚಿಸಲಾಯಿತು. ಜಗತ್ತನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ಜಗತ್ತಿನ ಎಲ್ಲಾ ಏಜೆನ್ಸಿಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ನಾವು ಶಕ್ತಿಯನ್ನು ಬಳಸುವಾಗ ನಮ್ಮ ಅಗತ್ಯಕ್ಕೆ ಮಾತ್ರ ಬಳಸಬೇಕು. ಭಾರತದಲ್ಲಿ ಆಗುತ್ತಿರುವ ಅಭಿವೃದ್ಧಿಯು ಇಡೀ ಜಗತ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದರು.