ಬೆಂಗಳೂರು:- ಯಾವುದೇ ಆಪರೇಷನ್ ಗುರಿ ಇಲ್ಲ, ಲೋಕಸಭಾ ಚುನಾವಣೆಯೇ ನಮ್ಮ ಗುರಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಿಂದ ಯಾವುದೇ ಆಪರೇಷನ್ ಗುರಿ ಇಲ್ಲ. ಲೋಕಸಭೆ ಚುನಾವಣೆಯೊಂದೇ ನಮ್ಮ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿಯೇ ಬಿಜೆಪಿಯ ಟಾರ್ಗೆಟ್ ಎನ್ನಲಾಗುತ್ತಿದೆ. ಅಲ್ಲದೆ, ಆಪರೇಷನ್ ಕಮಲ ಆರಂಭವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಮಂಡ್ಯ ಸಂಸದೆ ಸುಮಲತಾ ಅವರಿಗೆ ಬೇರೆ ಕ್ಷೇತ್ರ ಕೊಟ್ಟಿ ಜೆಡಿಎಸ್ಗೆ ಮಂಡ್ಯ ಕ್ಷೇತ್ರವನ್ನು ನೀಡುವ ಪ್ಲಾನ್ ಮಾಡಲಾಗುತ್ತಿದೆ. ಆದರೆ, ಸುಮಲತಾ ಅವರು ಬಿಜೆಪಿಯಿಂದ ಮಂಡ್ಯದಲ್ಲಷ್ಟೇ ಸ್ಪರ್ಧಿಸುತ್ತೇನೆ ಎಂದು ಕಡ್ಡಿಮುರಿದ ಹಾಗೆ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಸುಮಲತಾ ಜೊತೆ ಫೋನ್ ಕರೆ ಮಾಡಿ ಮಾತನಾಡಿದ್ದೇನೆ. ಶೀಘ್ರದಲ್ಲೇ ಸಂಸದೆ ಸುಮಲತಾ ಭೇಟಿ ಮಾಡುತ್ತೇನೆ ಎಂದರು.