ಬೆಂಗಳೂರು:- ಮುಡಾ ಕೇಸ್ನಲ್ಲಿ ಬಿ ರಿಪೋರ್ಟ್ ಬಂದಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ: ತನಿಖೆ ಚುರುಕು!
ಈ ಸಂಬಂಧ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯವನ್ನು ಉಂಟು ಮಾಡಿಲ್ಲ ಎಂದರು.
ಲೋಕಾಯುಕ್ತ ಸಂಸ್ಥೆ ತನಿಖೆ ಮಾಡುತ್ತಿರುವಾಗ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ಮಾದರಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದು ಸಿದ್ದರಾಮಯ್ಯನವರು ಆರಂಭದಲ್ಲಿ ಹೇಳಿದ್ದರು. ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದು ತಿಳಿಸಿದ್ದಾಗಿ ಗಮನ ಸೆಳೆದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.