ಮದ್ದೂರು:- ರೈತರು ಕಾವೇರಿ ಹೋರಾಟ ಕೈಬಿಡಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಧರಣಿಯನ್ನು ಕೈಬಿಡುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು
38 ದಿನಗಳವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಈ ಕುರಿತು ಜಲಸಂಪನ್ಮೂಲ ಸಚಿವರು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಜಲಾಶಯಗಳಲ್ಲಿ ನೀರು ಇದ್ದರೆ ತಾನೇ ಬಿಡೋಕೆ ಸಾಧ್ಯ.
ನೀರಿನ ಪರಿಸ್ಥಿತಿ ಏನು ಇದೆ ಎನ್ನುವುದನ್ನೂ ನೋಡಬೇಕಿದೆ. ನಮ್ಮಲ್ಲಿ ನೀರು ಇದ್ದರೆ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಬೆಳೆಗೆ ನೀರು ಕೊಟ್ಟಿದ್ದೇವೆ. ಸದ್ಯಕ್ಕೆ ಕುಡಿಯಲು ಮಾತ್ರ ನೀರು ಇದೆ. ವಾಸ್ತವ ಪರಿಸ್ಥಿತಿಯನ್ನು ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಇದರ ನಡುವೆಯೂ ನೀರು ಹರಿಸುವಂತೆ ಶಿಫಾರಸು ಮಾಡಿದರೆ ನೀರು ಬಿಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ನೀರಿನ ಸಂಕಷ್ಟದ ನಡುವೆಯೂ ಕೆರೆಗಳನ್ನು ತುಂಬಿಸುವ, ಬೆಳೆಗಳಿಗೆ ನೀರು ಹರಿಸುವ ಮೂಲಕ ರೈತರ ಸಂಕಷ್ಟಕ್ಕೆ ಸಾಧ್ಯವಾದಷ್ಟು ಸ್ಪಂದಿಸಿದ್ದೇವೆ. ರೈತರ ಹಿತ ಕಾಪಾಡುವುದಕ್ಕೂ ಬದ್ಧರಾಗಿದ್ದೇವೆ. ಅದಕ್ಕಾಗಿ ರೈತರು ಕೂಡಲೇ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದರು.