ತುಮಕೂರು: ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು ಎಂದು ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ. ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ (BJP) ಕಚೇರಿಯಲ್ಲಿ ಅವರು ಮಾತನಾಡಿದ್ದಾರೆ.
ಈ ವೇಳೆ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎನ್ನುವ ಕುರಿತಾಗಿ ಭಾರೀ ಚರ್ಚೆಗಳು ನಡೆದಿವೆ. ಅಂತಿಮವಾಗಿ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ನಮ್ಮ ಪಕ್ಷ ರಾಷ್ಟ್ರೀಯ ನಾಯಕರಿಗೆ ಕೊಡುವ ಗೌರವವನ್ನು ಬೂತ್ ಕಾರ್ಯಕರ್ತನಿಗೂ ಕೊಡುತ್ತದೆ. ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದಿದ್ದಾರೆ. ಇಡೀ ಜಗತ್ತೇ ನರೇಂದ್ರ ಮೋದಿ ಅವರನ್ನು ಮೆಚ್ಚಿದೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಎಲ್ಲಾ ಹಿರಿಯರ ವಿಶ್ವಾಸದೊಂದಿಗೆ ಪಕ್ಷ ಮುನ್ನಡೆಸಬೇಕು. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ಮಾಡಿ, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡ ಬೇಕಿದೆ. ಅತ್ಯಲ್ಪ ಕಾಲದಲ್ಲೇ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಇದಾಗಿದೆ ಎಂದಿದ್ದಾರೆ.