ದಾವಣಗೆರೆ: 2023 ರ ಚುನಾವಣೆಯಲ್ಲಿ ನಮ್ಮವರೆ ಬಿಜೆಪಿ ನೂರು ಸ್ಥಾನ ಬರದಬಾರದು ಅಂತ ಷ್ಯಡ್ಯಂತ್ರ ಮಾಡಿದ್ರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೆ ಮುಖ್ಯಮಂತ್ರಿಯಾಗಬೇಕು ಅಂತ ಹಗಲು ಕನಸು ಕಾಣ್ತಾ ಇದ್ದರು ಎಂದು ಪರೋಕ್ಷವಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಗೆ ಟಾಂಗ್ ನೀಡಿದ್ದಾರೆ. ಈ ಚುನಾವಣಾ ಪೂರ್ವದಲ್ಲಿ ಜೆಡಿಎಸ್ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದ್ರು. ಆದ್ದರಿಂದ ನಮ್ಮ ಪಕ್ಷದ ಹಿರಿಯ ನಾಯಕರನ್ನು ಕಡೆಗಣಿಸಿದ್ದಾರೆ.
ಯಡಿಯೂರಪ್ಪರನ್ನು ಕೆಳಗೆ ಇಳಿಸಿದ್ರು. ಈಶ್ವರಪ್ಪ, ಜಗದೀಶ್ ಶೆಟ್ಟರ್, ಸವದಿ ಸೇರಿದಂತೆ ಫ್ರಂಟ್ ಲೈನ್ ನಾಯಕರನ್ನು ಮುಗಿಸಿದರು. ಒಬ್ಬ ವ್ಯಕ್ತಿ ದೆಹಲಿಯಲ್ಲಿ ಕೂತು ಸಿಎಂ ಆಗಲು ಇದೆಲ್ಲ ಮಾಡಿದ್ದಾನೆ ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ ಹೊರಹಾಕಿದರು. ಯಡಿಯೂರಪ್ಪರವರ ಪರವಾಗಿ ಮಾತನಾಡಿದ್ದಕ್ಕೆ ಈ ರೀತಿ ಮಾಡ್ತಾ ಇದ್ದಾರೆ. ಪರವಾಗಿ ಮಾತನಾಡಿದರೆ ನೋಟಿಸ್, ಅವರ ವಿರುದ್ಧವಾಗಿ ಮಾತನಾಡಿದರೆ ನೋಟೀಸ್ ಇಲ್ಲ. ಇದು ಯಾವ ನ್ಯಾಯ? ಎಂದು ಎಂಪಿ ರೇಣುಕಾಚಾರ್ಯ ಕಿಡಿಕಾರಿದರು.