ಬೆಂಗಳೂರು: ಬಿಜೆಪಿಗರು ಅಯೋಧ್ಯೆಗೆ ಇವಾಗ ಏಕೆ ಹೊಗ್ತಿದ್ದಾರೆ? ಶ್ರೀರಾಮಚಂದ್ರ ಇಲ್ಲಿ ಇಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಗೈರು ನಿರ್ಧಾರ ವಿವಾದದ ಕುರಿತಾಗಿ ಪ್ರತಿಕ್ರಿಯೆ ನೀಡಿ, ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ, ಬದಲಾಗಿ ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ ಎಂದು ಹೇಳಿದರು.
ನಾವು ಶ್ರೀರಾಮ ಚಂದ್ರನ ವಿರುದ್ಧವಾಗಿಲ್ಲ. ಆದರೆ, ಬಿಜೆಪಿಯವರು ರಾಜಕೀಯ ಮಾಡೋಕೆ ಹೊರಟಿದ್ದಾರೆ. ಅದನ್ನ ಒಂದು ದೊಡ್ಡ ರಾಜಕೀಯ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ ಎಂದರು. ಶ್ರೀರಾಮಚಂದ್ರನನ್ನು ಬಿಜೆಪಿಯವರು ರಾಜಕೀಯ ವಿಷಯವಾನ್ನಾಗಿ ಮಾಡಿಕೊಂಡಿದ್ದಾರೆ. ಅದನ್ನು ನಾವು ವಿರೋಧ ಮಾಡ್ತಿದ್ದೇವೆ ಅಷ್ಟೇ. ನಾವೆಲ್ಲ ಶ್ರೀರಾಮಚಂದ್ರನ ಭಕ್ತರೇ. ಕೇಂದ್ರ ಸಚಿವರುಗಳು ರಾಜಕೀಯ ಮಾತನಾಡ್ತಿದ್ದಾರೆ ಅಷ್ಟೇ.
ರಾಜಕೀಯ ಮಾತನಾಡೋರಿಗೆ ಔಷಧವಿಲ್ಲ ಎಂದರು. ನಾವು ಶ್ರೀರಾಮಚಂದ್ರನ ವಿರುದ್ಧ ವಿಲ್ಲ. ಶ್ರೀರಾಮಚಂದ್ರನನ್ನ ನಾವು ಗೌರವಿಸುತ್ತೇವೆ, ಪೂಜೆ ಮಾಡ್ತೀವಿ, ಭಜನೆ ಮಾಡ್ತೀವಿ. ಅಷ್ಟೇ ಅಲ್ಲ, ರಾಮಮಂದಿರ ಕಟ್ಟಿದ್ದೇವೆ ನಾವು ಎಂದು ಪಕ್ಷದ ನಡೆಯನ್ನು ಸಮರ್ಥಿಸಿಕೊಂಡರು