ಶಿವಮೊಗ್ಗ: ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಜಮೀರ್ ಅಹಮ್ಮದ್ (Zameer Ahmed Khan) ಸಂವಿಧಾನ ಪೀಠಕ್ಕೆ ಅಪಮಾನ ಮಾಡಿದ್ದಾರೆ. ಅವರೊಬ್ಬ ರಾಷ್ಟ್ರದ್ರೋಹಿ, ತಕ್ಷಣ ಅವರನ್ನು ಸಚಿವ ಸಂಪುಟ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಚಿವ ಜಮೀರ್ ಅಹಮ್ಮದ್ ಮುಸ್ಲಿಂ ಸಭಾಧ್ಯಕ್ಷರಿಗೆ (Muslim Speaker) ಎಲ್ಲರೂ ತಲೆಭಾಗಿ ವಿಧಾನಸಭೆ ಚಟುವಟಿಕೆ ನಡೆಸುತ್ತಾರೆ ಎಂದು ಹೇಳಿದ್ದಾರೆ. ನಾವು ಗೌರವ ಕೊಡೋದು ಸಂವಿಧಾನಿಕ ಸಭಾಧ್ಯಕ್ಷರ ಪೀಠಕ್ಕೆ, ಮುಸ್ಲಿಂ ವ್ಯಕ್ತಿಗಲ್ಲ ಎಂದು ನುಡಿದಿದ್ದಾರೆ.
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಇಂತಹ ಹೇಳಿಕೆಗಳನ್ನ ಗಮನಿಸಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಭಾರತದ ಸಂವಿಧಾನದ ಪ್ರಕಾರ ಆಡಳಿತ ನಡೆಸುತ್ತಿದೆಯೋ? ಅಥವಾ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತದ ಪ್ರಕಾರ ಆಡಳಿತ ನಡೆಸುತ್ತಿಯೋ ಎಂಬ ಸಂಶಯವಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.