ಬೆಂಗಳೂರು:- ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕು ಎಂದರು.
ಮುತ್ತಗಿ ಹಳ್ಳದಲ್ಲಿ ಬ್ರಿಜ್, ಸೇತುವೆ ಕಾಮಗಾರಿಗೆ ಚಾಲನೆ ನೀಡಿದ ಸಂತೋಷ್ ಲಾಡ್!
ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ಫೆಲೊಗಳು ಸೇತುವೆಗಳಂತೆ ಕಾರ್ಯನಿರ್ವಹಿಸಬೇಕು. ಈ ಪ್ರದೇಶದ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವ ಗೋವಿಂದರಾವ್ ಸಮಿತಿಗೆ ಪೂರಕ ಅಂಕಿ ಅಂಶಗಳ ದತ್ತಾಂಶಗಳನ್ನು ನೀಡುವ ದೃಷ್ಟಿಯಲ್ಲಿಯೂ ಫೆಲೊಗಳು ಕಾರ್ಯಪ್ರವೃತ್ತರಾಗಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಗ್ರಾಮ ಪಂಚಾಯತಿಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ನಿಕಟ ಸಂಪರ್ಕ ಇರಿಸಿಕೊಂಡು ಗ್ರಾಮ ಪಂಚಾಯತಿಗಳಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಲು ವರದಿಯನ್ನು ಸಿದ್ಧಪಡಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಆ ಮೂಲಕ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಸಚಿವರು ಫೆಲೊಗಳಿಗೆ ಸೂಚಿಸಿದರು.