ಮದ್ದೂರು: ಕುಮಾರಸ್ವಾಮಿಗೆ ನಮ್ಮನ್ನು ನೋಡಿ ಸಹಿಸೋಕಾಗುತ್ತಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ನಾನು ಅಧಿಕಾರದಲ್ಲಿರುವುದನ್ನು ನೋಡಿ ಕುಮಾರಸ್ವಾಮಿ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ಖುಷಿಯಾಗಿರಬೇಕು ಎಂದರೆ ನಾವು ರಾಜಕೀಯದಿಂದ ನಿವೃತ್ತಿಯಾಗಬೇಕು. ಆಗಲಾದರೂ ನೆಮ್ಮದಿಯಾಗಿರುತ್ತಾರೋ ನೋಡಬೇಕು ಎಂದು ಲೇವಡಿ ಮಾಡಿದರು.
ಕುಮಾರಸ್ವಾಮಿಗೆ ಅಧಿಕಾರ ಸಿಕ್ಕಾಗ ಅದನ್ನು ಮುನ್ನಡೆಸೋಕೆ ಆಗೋಲ್ಲ. ಅಧಿಕಾರ ಬಿಟ್ಟು ಇರಲಾಗುವುದಿಲ್ಲ. ಅವರು ಒಂದು ರೀತಿಯಲ್ಲಿ ಹತಾಶರಾಗಿದ್ದಾರೆ. ಅಧಿಕಾರ ಸಿಕ್ಕಿದಷ್ಟು ದಿನ ಪೂರ್ಣ ಪ್ರಮಾಣದಲ್ಲಿ ಅಧಿಕಾರ ನಡೆಸಲು ಆಗಿಲ್ಲ. ನಮ್ಮ ಮಾಜಿ ಸ್ನೇಹಿತರನ್ನು ನೋಡಿದರೆ ನನಗೆ ಪಾಪ ಅನ್ನಿಸುತ್ತದೆ ಎಂದು ವ್ಯಂಗ್ಯವಾಡಿದರು.
ಕುಮಾರಸ್ವಾಮಿಯವರು ಆರೋಗ್ಯವಾಗಿ, ನೆಮ್ಮದಿಯಿಂದ, ಖುಷಿಯಾಗಿರಬೇಕು ಅಂತ ಅಂದುಕೊಳ್ಳುತ್ತೇವೆ. ಅಧಿಕಾರದಲ್ಲಿರುವ ನಮ್ಮನ್ನು ನೋಡಿ ಅವರಿಗೆ ತಡೆದುಕೊಳ್ಳಲಾಗದೆ ಅವರಿವರನ್ನು ಬೈಯ್ಯುತ್ತಾ ಲಘುವಾಗಿ ಮಾತನಾಡುತ್ತಾರೆ. ಮಾಜಿ ಪ್ರಧಾನಿ ರಕ್ಷಣೆ ಇದೆ ಎಂದು ಬಾಯಿಗೆ ಬಂದಂತೆ ಮಾತನಾಡಬಾರದು. ಮಾತನಾಡುವುದಕ್ಕೂ ಒಂದು ಇತಿ-ಮಿತಿ ಇರುತ್ತದೆ ಎಂದರು