ಬಳ್ಳಾರಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೇ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ ಎಂದು ಖರ್ಗೆ ಪರ ಸಚಿವ ನಾಗೇಂದ್ರ ಬ್ಯಾಟಿಂಗ್ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಮಾಡೋದು, ದಲಿತ ಪ್ರಧಾನಿ ಮಾಡೋದು ಇಂಡಿಯಾ ಒಕ್ಕೂಟದ ಉದ್ದೇಶ. ಹೀಗಾಗಿ ಒಕ್ಕೂಟದಿಂದ ಖರ್ಗೆ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಪ್ರಸ್ತಾಪ ಮಾಡಿದ್ದಾರೆ.
ಆದರೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ. ಅದು ಅವರ ಅಭಿಪ್ರಾಯ. ಸ್ವಇಚ್ಛೆಯಿಂದ ಸಿದ್ದರಾಮಯ್ಯ ಅವರು ಹಾಗೆ ಹೇಳಿರಬಹುದು. ಅದು ಅವರ ಇಚ್ಛೆ ಎಂದರು. ನನಗೂ ಖರ್ಗೆ ಪ್ರಧಾನಿ ಆಗಬೇಕೆಂದಿದೆ.
ಅದರ ಜೊತೆಗೆ ಯುವಕರ ಕಣ್ಮಣಿಯಾಗಿರೋ ರಾಹುಲ್ ಗಾಂಧಿ ಕೂಡಾ ಪ್ರಧಾನಿಯಾಗಬೇಕು ಎನ್ನುವುದು ಇದೆ. ಭಾರತ ಜೋಡೋ ಯಾತ್ರೆಯಲ್ಲಿ ಏಳು ಸಾವಿರ ಕಿ.ಮೀ ಪಾದಯಾತ್ರೆ ಮಾಡಿ ಜನಮನ ಗೆದ್ದಿದ್ದಾರೆ. ಇಂಡಿಯಾ ಒಕ್ಕೂಟದ ವ್ಯವಸ್ಥೆಯಲ್ಲಿ ಬೇರೆ ಬೇರೆ ಅಂಗಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕು. ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಕೂಡ ಖರ್ಗೆಯನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು.