ಹುಬ್ಬಳ್ಳಿ: ‘ಧಾರವಾಡ ಜಿಲ್ಲಾ ಮಟ್ಟದ ದೇವಸ್ಥಾನಗಳ ಅಧಿವೇಶನ ಜ. 28ರಂದು ನಗರದ ನಗರದ ಉತ್ತರಾಧಿಮಠದಲ್ಲಿ ನಡೆಯಲಿದೆ’ ಎಂದು ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ರಾಜ್ಯ ಸಮನ್ವಯಕಾರ ಗುರುಪ್ರಸಾದ ಗೌಡಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 10ಕ್ಕೆ ಅಧಿವೇಶನ ಆರಂಭವಾಗಲಿದ್ದು, ಸಂಜೆ 5ರವರೆಗೂ ನಡೆಯಲಿದೆ. ಧಾರವಾಡ ಜಿಲ್ಲೆಯ ಎಲ್ಲ ದೇವಸ್ಥಾನಗಳ ವಿಶ್ವಸ್ಥ ಮಂಡಳಿಯ ಪದಾಧಿಕಾರಿಗಳು, ಮಠಾಧೀಶರು ಹಾಗೂ ಧಾರ್ಮಿಕ ಮುಖಂಡರು, ಪುರೋಹಿತರು ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮೊದಲು ನಗರದಲ್ಲಿ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸಲಾಗುವುದು’ ಎಂದು ತಿಳಿಸಿದರು.
‘ಕಳೆದ ಡಿಸೆಂಬರ್’ನಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಅಧಿವೇಶನ ಯಶಸ್ವಿಯಾಗಿದ್ದು, ರಾಜ್ಯದ ಅನೇಕ ದೇವಸ್ಥಾನಗಳ ವಿಶ್ವಸ್ಥ ಮಂಡಳಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸರ್ಕಾರದ ಅಧೀನದಲ್ಲಿರುವ ದೇವಸ್ಥಾನಗಳನ್ನು ಖಾಸಗಿತನಕ್ಕೆ ಪಡೆಯುವುದು, ವಸ್ತ್ರಸಂಹಿತೆ ಸೇರಿದಂತೆ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಇದೀಗ ಜಿಲ್ಲಾಮಟ್ಟದಲ್ಲಿ ಅಧಿವೇಶನ ನಡೆಸಿ, ನಿರ್ಣಯ ಹಾಗೂ ಜಾಗೃತಿ ಮೂಡಿಸಲಾಗುವುದು’ ಎಂದು ತಿಳಿಸಿದರು.
ವಿನಾಯಕ ಆಕಳವಾಡಿ, ಪ್ರಕಾಶ ಬೆಂಡಿಗೇರಿ, ವಿದುಲಾ ಹಳದಿಪುರ, ಭಾಸ್ಕರ ಜಿತೂರಿ ಇದ್ದರು