ಬೆಂಗಳೂರು: ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ರಾಷ್ಟ್ರೀಯ ನಾಯಕರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಬೂತ್ ಗೆದ್ದರೇ ರಾಷ್ಟ್ರ ಗೆಲ್ತೇವೆ ಎಂದು ನಡ್ಡಾ ಅವರ ಕಲ್ಪನೆ ಇದೆ. ಹೀಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದರು.
Yadiyurappa: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ: BSY
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಸಿಗುವ ಗೌರವ ಬೂತ್ ಅಧ್ಯಕ್ಷರಿಗೂ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಯಾವುದೇ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರುವವರಲ್ಲ. ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಾರೋ ಮಾಡಲಿ. ಮುಂದೆ ಅವರಿಗೆ ನಾವೆಲ್ಲರೂ ತಕ್ಕ ಉತ್ತರ ಕೊಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.