ಬೆಳಗಾವಿ: ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂಬ ಬರಹ ಇರುವ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದೆ.
ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಆನಂದ ಸೊಲಾಪೂರೆ ನೀಡಿರುವ ಮಾಹಿತಿ ಪ್ರಕಾರ ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದ್ದು ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಬೆದರಿಕೆ ಪತ್ರ ಬರೆದು ಮಂದಿರದಲ್ಲಿ ಬಿಟ್ಟು ಹೋದ ಅನಾಮಧೇಯ ವ್ಯಕ್ತಿಗಳು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಶ್ರೀ ರಾಮ ಮಂದಿರ
ಫೆ 7 ಹಾಗೂ 28ರಂದು ಬಂದ ಬೆದರಿಕೆ ಪತ್ರಗಳಾಗಿದ್ದು ಮುಂದಿನ 20, 21ತಾರೀಖು ಒಳಗಡೆ ಸ್ಪೋಟಿಸುತ್ತೇವೆ ಎಂದು ಪತ್ರ ಬರೆದಿದ್ದು ಹೈ ಅಲರ್ಟ ಘೋಷಿಸಿದ ಬೆಳಗಾವಿ ಜಿಲ್ಲಾ ಪೋಲಿಸ್ ಮಂದಿರದ ಆವರಣದಲ್ಲಿ 14 ಸಿಸಿಟಿವಿ ಅಳವಡಿಕೆಸತತ ಪೋಲಿಸ್ ಬಂದು ಬಸ್ತ್ ನಿಯೋಜನೆ ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.