ಬೆಂಗಳೂರು: ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನ ತೇಲಿಬಿಡ್ತೀರಿ. ಎಲ್ಲರೂ ಒಟ್ಟಿಗೆ ಶಕ್ತಿಯಾಗಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಬೇಕು. ಎಲ್ಲರನ್ನೂ ಒಳಗೊಂಡಂತಹ ಸಂಘಟನೆ ಮಾಡುವ ಉದ್ದೇಶ ಇದೆ ಎಂದು ಹೇಳಿದರು.
ಸದ್ಗುರು ಕಾರ್ಯಕ್ರಮದಲ್ಲಿ ಮೋದಿ ಅವರು ಹಿಂದೆ ಭಾಗವಹಿಸಿದ್ದರು. ಅಮಿತ್ ಶಾ ಅವರು ಭಾಗಿಯಾಗಿದ್ದರು. ನಾವೂ ಸಹ ಸಾಕಷ್ಟು ಸಲ ಭಾಗಿವಹಿಸಿದ್ದೆವು. ಆದರೆ, ಕಾಂಗ್ರೆಸ್ನಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯುತ್ತಿರುವುದು ಅವರ ಪಕ್ಷದ ವಿಚಾರ ಎಂದು ಹೇಳಿದರು.