ಬೆಂಗಳೂರು: ಖಾಲಿ ಇರುವ 2,800 ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಕಾಲ ಕ್ರಮೇಣ ಹುದ್ದೆಗಳು ಖಾಲಿ ಆಗಿದೆ. ಹಿಂದಿನ ಸರ್ಕಾರಗಳು ಯಾರೂ ನೇಮಕ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಸುಮಾರು 2,800 ಬೋಧಕ ಹುದ್ದೆ ಖಾಲಿ ಇದೆ. ಜನಪದ ವಿವಿ ನೇಮಕಾತಿ ಸಮಯದಲ್ಲಿ ದೊಡ್ಡ ಸಮಸ್ಯೆ ಆಗಿತ್ತು.
ಹೀಗಾಗಿ ಇದಕ್ಕಾಗಿ ವಿಶೇಷ ನಿಯಮ ಮಾಡಿ ಕೆಇಎ ಸಂಸ್ಥೆ ಮೂಲಕ ಹುದ್ದೆ ನೇಮಕಾತಿಗೆ ಅನುಮತಿ ಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಕೆಲವೊಂದಕ್ಕೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಸಿಎಂ ಅವರ ಗಮನಕ್ಕೂ ಖಾಲಿ ಇರುವ ಬಗ್ಗೆ ಮನವರಿಕೆ ಮಾಡಲಾಗಿದೆ.
ನೀವು ಟ್ರೈನ್ ಟಿಕೆಟ್ ಕ್ಯಾನ್ಸಲ್ ಮಾಡುತ್ತಿದ್ದೀರಾ..? ರದ್ದತಿ ಶುಲ್ಕ ನಿಯಮಗಳ ಬಗ್ಗೆ ನಿಮಗೆಷ್ಟು ಗೊತ್ತು..?
ಸಿಎಂ ಅವರು ಕೂಡಾ ಖಾಲಿ ಹುದ್ದೆ ತುಂಬೋದಕ್ಕೆ ಉತ್ಸುಕರಾಗಿದ್ದಾರೆ. ಹಂತ ಹಂತವಾಗಿ ಖಾಲಿ ಹುದ್ದೆ ಭರ್ತಿ ಮಾಡುತ್ತೇವೆ ಎಂದು ತಿಳಿಸಿದರು. ಎಲ್ಲಾ ವಿಶ್ವವಿದ್ಯಾಲಯಗಳ ಪರಿಶೀಲನೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. ಕೆಲವು ವಿವಿಗಳಲ್ಲಿ ಅನಗತ್ಯವಾಗಿ ಹುದ್ದೆ ಭರ್ತಿ ಮಾಡಲಾಗಿದೆ. ಈ ಬಗ್ಗೆಯೂ ಪರಿಶೀಲನೆ ಮಾಡಿ ಆದಷ್ಟೂ ಬೇಗ ಖಾಲಿ ಹುದ್ದೆ ಭರ್ತಿ ಮಾಡುತ್ತೇವೆ ಎಂದು ತಿಳಿಸಿದರು.