ಹುಬ್ಬಳ್ಳಿ;- ಬಿಜೆಪಿ ಅವರ ಆಂತರಿಕ ವಿಚಾರದ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪುತ್ರ ವಿಜಯೇಂದ್ರ ಭ್ರಷ್ಟ ಎನ್ನುವ ಕಾರಣಕ್ಕೆ ಬಿಎಸ್ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಈಗ ಅದೇ ವಿಜಯೇಂದ್ರರನ್ನು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ.
ಮಧ್ಯಪ್ರದೇಶದಲ್ಲಿ ಅಪ್ಪ ಹಾಗೂ ಮಗ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿರುವ ದೃಶ್ಯಾವಳಿಗಳು ಬಂದಿವೆ.ಅದರ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ಹೇಳಿ. ಸುಮ್ಮನೆ ಯಾವುದೋ ಒಂದರ ಬಗ್ಗೆ ಮಾತನಾಡಿದರೆ ಹೇಗೆ? ಸಿದ್ದರಾಮಯ್ಯರ ಪುತ್ರ ಯತೀಂದ್ರ ಮಾತಿನ ದೃಶ್ಯಾವಳಿಯಲ್ಲಿ ವರ್ಗಾವಣೆ ಎಂಬ ಪದವೇ ಇಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಅದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದರು.