ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ರಾಜ್ಯ ಸರ್ಕಾರದ ಜಾಹೀರಾತಿಗೆ ವಿಪಕ್ಷಗಳು ಆಕ್ಷೇಪ ಎತ್ತಿರುವ ವಿಚಾರವಾಗಿ ಮಾತನಾಡಿದ ಅವರು, ನಮಗಿರುವ ಮಾಹಿತಿಯನ್ನು ಜಾಹಿರಾತು ರೂಪದಲ್ಲಿ ನೀಡಿದ್ದೇವೆ. ನಾವು ಮುನ್ನಡೆಯುತ್ತಿರುವ ದಾರಿಯ ಆಧಾರದ ಮೇಲೆ ಮತ್ತು ನಮ್ಮ ಭಾವನೆಗಳ ಮೇಲೆ ಜಾಹೀರಾತು ನೀಡಿದ್ದೇವೆ. ನಮ್ಮ ಸರ್ಕಾರದ ಸಾಧನೆ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡುತ್ತೇವೆ ಎಂದರು.
ಈ ವರ್ಷ ದಸರಾ ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಮಳೆ-ಬೆಳೆ ಕೊಟ್ಟಿದ್ದಾಳೆ. ತಮಿಳುನಾಡಿನ ಹೋರಾಟ ಕಡಿಮೆಯಾಗಿದೆ. ಎಲ್ಲ ಡ್ಯಾಂಗಳು ತುಂಬಿವೆ. ಕಟ್ ಆಗಿದ್ದ ತುಂಗಭದ್ರಾ ಡ್ಯಾಂನ ಗೇಟ್ ಅನ್ನು ಆರು ದಿನದಲ್ಲೇ ಕೂರಿಸಿ ನೀರು ಪೋಲಾಗುತ್ತಿದ್ದದ್ದನ್ನು ನಿಲ್ಲಿಸಿದ್ದೇವೆ. ಅ.16 ಬೆಂಗಳೂರಿಗೆ ವಿಶೇಷ ದಿನವಾಗಿದೆ. ಐದನೇ ಹಂತದ ಕುಡಿಯುವ ಯೋಜನೆ ಚಾಲನೆ ಸಿಗಲಿದೆ. ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.