ಬೆಂಗಳೂರು: ಬೆಂಗಳೂರು ಉಸ್ತುವಾರಿ ವಹಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರ ಬಗ್ಗೆ ತುಂಬಾ ಕಾಳಜಿ ವಹಿಸಿತ್ತು ಇನ್ನೇನು ಬಿಬಿಎಂಪಿ ಚುನಾವಣೆ ಬರಲಿದ್ದು ಆ ಕಡೆ ಗಮನ ಹರಿಸಿದ್ದಾರೆ.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಬಿಎಂಪಿ ಚುನಾವಣೆ ಮಾಡುತ್ತೇವೆ. ಚುನಾವಣೆ ಮಾಡಲೇಬೇಕು, ಯಾರೂ ತಪ್ಪಿಸಿಕೊಳ್ಳಲು ಆಗಲ್ಲ. ಚುನಾವಣೆ ವಿಚಾರವಾಗಿ ಕೋರ್ಟ್ ನಿರ್ದೇಶನ ಪಾಲಿಸಬೇಕು. ವಾರ್ಡ್ ಎಷ್ಟಿರಲಿದೆ ಎಂದು ಈಗಲೇ ಹೇಳಲು ಆಗಲ್ಲ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
